ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸರ್ಧಾನದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 23 ಜನರು ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳು ಸುಮಾರು 50 ಜನರು ಅಸ್ವಸ್ಥರಾಗಿದ್ದಾರೆ ಎಂದು ವರದಿ ಮಾಡಿದೆ. ಹಲವಾರು ಜನರು ಒಟ್ಟಿಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಐದು ವಿಭಿನ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಾಂತೆ ತರಾತುರಿಯಲ್ಲಿ ಸಿಎಂಒ ಸೇರಿದಂತೆ ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಮೂರು ದಿನಗಳಿಂದ ಕಲುಷಿತ ನೀರು ಪೂರೈಕೆ
ಮೀರತ್‌ನ ಸರ್ಧಾನ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಂಡಿ ಚಾಮರನ್ ಬಡಾವಣೆಯ ನೀರಿನ ಟ್ಯಾಂಕ್‌ನಿಂದ ಸುಮಾರು ಮೂರು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಅಲ್ಲಿನ ಜನರು ಆರೋಪಿಸಿದ್ದಾರೆ.
“ನೀರು ದುರ್ವಾಸನೆ ಬೀರುತ್ತಿದ್ದು, ಬಕೆಟ್‌ನಲ್ಲಿ ನೀರನ್ನು ತೆಗೆದುಕೊಂಡರೆ ಅದರಲ್ಲಿ ನೊರೆ ಬರುತ್ತಿದೆ. ಅಷ್ಟೇ ಅಲ್ಲದೆ, ಅಡುಗೆ ಮಾಡಿದರೂ ಕೆಟ್ಟ ವಾಸನೆ ಬರುತ್ತಿದ್ದು, ರೊಟ್ಟಿಗಳು ಕಪ್ಪಾಗುತ್ತಿವೆ” ಎಂದು ಅವರು ಹೇಳಿದ್ದಾರೆ.
Uttar Pradesh | 23 people were admitted to hospital while the condition of 2-3 people is serious after they drank contaminated water in Sardhana of Meerut district. Most of them recovering: Akhilesh Mohan, Chief Medical Officer, Meerut pic.twitter.com/9CJ7CHwxsj
— ANI UP/Uttarakhand (@ANINewsUP) November 7, 2022
ಇದನ್ನೂ ಓದಿ: ‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ – ಉತ್ತರ ಪ್ರದೇಶ!
ಸೋಮವಾರ ರಾತ್ರಿಯಿಂದಲೇ ಬಡಾವಣೆಯ ಅನೇಕ ಜನರು ಒಂದಿಲ್ಲೊಂದು ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸುಮಾರು 50 ಜನರು ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಹೆಚ್ಚಾಗಿ ಮಕ್ಕಳೂ ಸೇರಿದ್ದಾರೆ. ಸರ್ಧಾನ ಮತ್ತು ಕಂಕರಖೇಡದ ಐದು ವಿವಿಧ ಆಸ್ಪತ್ರೆಗಳಲ್ಲಿ ಜನರನ್ನು ದಾಖಲಿಸಲಾಗಿದೆ ಎಂದು ಜನರು ಹೇಳುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ವರದಿ ಮಾಡಿದೆ.
ಇದೀಗ ಅನೇಕ ಜನರ ಆರೋಗ್ಯ ಸುಧಾರಿಸುತ್ತಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಕಲುಷಿತ ನೀರು ಸೇವಿಸಿದ್ದರಿಂದ ಸುಮಾರು 23 ಜನರು ಅಸ್ವಸ್ಥರಾಗಿದ್ದು, ಇವರಲ್ಲಿ 2-3 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೀರತ್‌ನ ಸಿಎಂಒ ಅಖಿಲೇಶ್ ಮೋಹನ್ ತಿಳಿಸಿದ್ದಾರೆ.
ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ದೀಪಕ್ ಮೀನಾ ಸೇರಿದಂತೆ ಆಡಳಿತ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಉತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು
ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದು, ನಿರ್ಲಕ್ಷ್ಯ ತೋರಿದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.


