Homeಮುಖಪುಟಯುಪಿ: ಕಲುಷಿತ ನೀರು ಕುಡಿದು 23 ಜನರು ಅಸ್ವಸ್ಥ; ಮೂವರು ಚಿಂತಾಜನಕ

ಯುಪಿ: ಕಲುಷಿತ ನೀರು ಕುಡಿದು 23 ಜನರು ಅಸ್ವಸ್ಥ; ಮೂವರು ಚಿಂತಾಜನಕ

- Advertisement -
- Advertisement -

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸರ್ಧಾನದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ 23 ಜನರು ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳು ಸುಮಾರು 50 ಜನರು ಅಸ್ವಸ್ಥರಾಗಿದ್ದಾರೆ ಎಂದು ವರದಿ ಮಾಡಿದೆ. ಹಲವಾರು ಜನರು ಒಟ್ಟಿಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಐದು ವಿಭಿನ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಾಂತೆ ತರಾತುರಿಯಲ್ಲಿ ಸಿಎಂಒ ಸೇರಿದಂತೆ ಜಿಲ್ಲೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂರು ದಿನಗಳಿಂದ ಕಲುಷಿತ ನೀರು ಪೂರೈಕೆ

ಮೀರತ್‌ನ ಸರ್ಧಾನ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಂಡಿ ಚಾಮರನ್‌ ಬಡಾವಣೆಯ ನೀರಿನ ಟ್ಯಾಂಕ್‌ನಿಂದ ಸುಮಾರು ಮೂರು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಅಲ್ಲಿನ ಜನರು ಆರೋಪಿಸಿದ್ದಾರೆ.

“ನೀರು ದುರ್ವಾಸನೆ ಬೀರುತ್ತಿದ್ದು, ಬಕೆಟ್‌‌ನಲ್ಲಿ ನೀರನ್ನು ತೆಗೆದುಕೊಂಡರೆ ಅದರಲ್ಲಿ ನೊರೆ ಬರುತ್ತಿದೆ. ಅಷ್ಟೇ ಅಲ್ಲದೆ, ಅಡುಗೆ ಮಾಡಿದರೂ ಕೆಟ್ಟ ವಾಸನೆ ಬರುತ್ತಿದ್ದು, ರೊಟ್ಟಿಗಳು ಕಪ್ಪಾಗುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ – ಉತ್ತರ ಪ್ರದೇಶ!

ಸೋಮವಾರ ರಾತ್ರಿಯಿಂದಲೇ ಬಡಾವಣೆಯ ಅನೇಕ ಜನರು ಒಂದಿಲ್ಲೊಂದು ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸುಮಾರು 50 ಜನರು ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಹೆಚ್ಚಾಗಿ ಮಕ್ಕಳೂ ಸೇರಿದ್ದಾರೆ. ಸರ್ಧಾನ ಮತ್ತು ಕಂಕರಖೇಡದ ಐದು ವಿವಿಧ ಆಸ್ಪತ್ರೆಗಳಲ್ಲಿ ಜನರನ್ನು ದಾಖಲಿಸಲಾಗಿದೆ ಎಂದು ಜನರು ಹೇಳುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ವರದಿ ಮಾಡಿದೆ.

ಇದೀಗ ಅನೇಕ ಜನರ ಆರೋಗ್ಯ ಸುಧಾರಿಸುತ್ತಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಕಲುಷಿತ ನೀರು ಸೇವಿಸಿದ್ದರಿಂದ ಸುಮಾರು 23 ಜನರು ಅಸ್ವಸ್ಥರಾಗಿದ್ದು, ಇವರಲ್ಲಿ 2-3 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೀರತ್‌ನ ಸಿಎಂಒ ಅಖಿಲೇಶ್ ಮೋಹನ್ ತಿಳಿಸಿದ್ದಾರೆ.

ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ದೀಪಕ್ ಮೀನಾ ಸೇರಿದಂತೆ ಆಡಳಿತ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಉತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮೀನಾ ತಿಳಿಸಿದ್ದು, ನಿರ್ಲಕ್ಷ್ಯ ತೋರಿದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....