Homeಮುಖಪುಟಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ...

ಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ ಅತ್ಯಾಚಾರ ಆರೋಪ

- Advertisement -
- Advertisement -

13 ವರ್ಷದ ಅತ್ಯಾಚಾರ ಸಂತ್ರಸ್ತೆ ಬಾಲಕಿಯು ದೂರು ನೀಡಲು ಠಾಣೆಗೆ ಹೋದಾಗ ಪೊಲೀಸ್ ಠಾಣೆಯಲ್ಲಿಯೇ ಮತ್ತೆ ಪೊಲೀಸ್‌ ಅಧಿಕಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಆಘಾತಕಾರಿ ಘಟನೆಯು ಉತ್ತರ ಪ್ರದೇಶದ ಲಲಿತ್‌ಪುರ್‌ನಲ್ಲಿ ವರದಿಯಾಗಿದೆ.

ನಾಲ್ಕು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ಬಾಲಕಿಯು ತನ್ನ ಸಂಬಂಧಿಕರೊಂದಿಗೆ ದೂರು ನೀಡಲು ಲಲಿತ್‌ಪುರ್ ಪೊಲೀಸ್ ಠಾಣೆಗೆ ಹೋಗಿದ್ದರು. ಆಗ ಅಲ್ಲಿನ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಎಂಬಾತ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯ ದೂರಿನ ಆಧಾರದಲ್ಲಿ ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ, ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಸದ್ಯ ಪರಾರಿಯಾಗಿದ್ದು, ಆತನ ಪತ್ತೆಗೆ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ, ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಹೇಳಿಕೆ ಆಧರಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆಯ ವಿವರ

ಬಾಲಕಿಯ ತಂದೆ ನೀಡಿದ ದೂರಿನಲ್ಲಿ, ಏಪ್ರಿಲ್ 22 ರಂದು ಸಂತ್ರಸ್ತ ಬಾಲಕಿಯನ್ನು ನಾಲ್ವರು ಅಪಹರಿಸಿ ಭೋಪಾಲ್‌ಗೆ ಕರೆದೊಯ್ದಿದ್ದರು. ಅಲ್ಲಿ ಅಮಾನವೀಯವಾಗಿ ಅತ್ಯಾಚಾರವೆಸಗಿ ವಾಪಸ್ ಲಲಿತ್‌ಪುರ್‌ಗೆ ತಂದು ಬಿಟ್ಟಿದ್ದರು. ಸಂತ್ರಸ್ತೆಯು ಪೊಲೀಸ್ ಠಾಣೆಗೆ ತೆರಳಿದಾಗ ಪೊಲೀಸರು ದೂರು ದಾಖಲಿಸಿಕೊಂಡು ಅವರ ಚಿಕ್ಕಮ್ಮನಿಗೆ ಬಾಲಕಿಯನ್ನು ತಲುಪಿಸಿದ್ದರು. ಅದರ ಮಾರನೇ ದಿನ ಹೇಳಿಕೆ ಪಡೆದುಕೊಳ್ಳಲು ಮತ್ತೆ ಪೊಲೀಸ್ ಠಾಣೆಗೆ ಬರುವಂತೆ ಹೇಳಿದ್ದರು. ಆ ದಿನ ಆರೋಪಿ ಸ್ಟೇಷನ್ ಹೌಸ್ ಆಫೀಸರ್ ಪೊಲೀಸ್ ಠಾಣೆಯಲ್ಲಿಯೇ ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಎದುರೇ ಅತ್ಯಾಚಾರಗೈದಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ಆಕೆಯ ಚಿಕ್ಕಮ್ಮನ ಹೆಸರನ್ನೂ ಸೇರಿಸಲಾಗಿದೆ.

ಇದನ್ನೂ ಒದಿ: ಅತ್ಯಾಚಾರ ತಡೆಗಟ್ಟಲು ಸಾಧ್ಯ! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಆರೋಪಿಗಳ ಮೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಡುತ್ತಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ನಿಖಿಲ್ ಪಾಠಕ್ ಹೇಳಿದ್ದಾರೆ.

ಅತ್ಯಾಚಾರವೆಂಬ ಮನುಷ್ಯವಿರೋಧಿ, ಅಮಾನವೀಯ ಘಟನೆಗಳು ಉತ್ತರ ಪ್ರದೇಶದಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ. ಉನ್ನಾವೋ, ಹತ್ರಾಸ್‌ನಂತಹ ಭೀಕರ ಘಟನೆಗಳು ನಡೆದ ನಂತರವೂ ಸರ್ಕಾರ ಈ ವಿಷಯದಲ್ಲಿ ಗಂಭೀರವಾಗಿಲ್ಲ ಎಂಬುದುನ್ನು ಈ ಪ್ರಕರಣಗಳು ಸಾಬೀತುಪಡಿಸುತ್ತಿವೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಅತ್ಯಾಚಾರದ ಆರೋಪ ಕೇಳಿ ಬಂದಿರುವುದು ದೇಶವೇ ತಲೆತಗ್ಗಿಸಬೇಕಾದ ಸಂಗತಿಯಾಗಿದೆ. ಈ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕಾದ ಮತ್ತು ದನಿ ಎತ್ತಬೇಕಾದ ಜರೂರು ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...