Homeದಲಿತ್ ಫೈಲ್ಸ್ಯುಪಿ: 16 ವರ್ಷದ ದಲಿತ ಬಾಲಕಿಗೆ ಅಮಾನವೀಯವಾಗಿ ಥಳಿಸಿದ ದುಷ್ಕರ್ಮಿಗಳು

ಯುಪಿ: 16 ವರ್ಷದ ದಲಿತ ಬಾಲಕಿಗೆ ಅಮಾನವೀಯವಾಗಿ ಥಳಿಸಿದ ದುಷ್ಕರ್ಮಿಗಳು

- Advertisement -
- Advertisement -

ಉತ್ತರ ಪ್ರದೇಶದ ಅಮೇಥಿಯಲ್ಲಿ 16 ವರ್ಷದ ದಲಿತ ಬಾಲಕಿಗೆ ಅಮಾನವಿಯವಾಗಿ ಥಳಿಸಿ ಕಿರುಕುಳ ನೀಡಿರುವ ಘಟನೆ ನಡೆದಿದೆ ಎಂದು ‘SheThePeople’ ಮಾಧ್ಯಮ ಸಂಸ್ಥೆ ವರದಿ ಮಾಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅದು ಉಲ್ಲೇಖಿಸಿದೆ.

ಮೂವರು ಆರೋಪಿಗಳಾದ ಸೂರಜ್ ಸೋನಿ, ಶಿವಂ ಮತ್ತು ಸಕಾಲ್ ವಿರುದ್ಧ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಅಧೀಕ್ಷಕ ಅರ್ಪಿತ್ ಕಪೂರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಆದರೆ ಆರೋಪಿಗಳು ತಪ್ಪಿಸಿಕೊಂಡಿದ್ದು, ಮೂವರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.youtube.com/embed/VLfolKgRUHA

ಬಾಲಕಿ ಅಮೇಥಿ ಜಿಲ್ಲೆಯ ಸಂಗ್ರಾಮ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿಯಾಗಿದ್ದು, ರಾಯ್‌ಪುರ ಫುಲ್ವಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಬಾಲಕಿಯನ್ನು ಮನೆಯೊಂದರ ಒಳಗೆ ಮೂವರು ಥಳಿಸುತ್ತಿದ್ದು, ಇದನ್ನು ಒಬ್ಬರು ವಿಡಿಯೊ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿ ಕನಿಷ್ಠ ಮೂವರು ಮಹಿಳೆಯರು ಕೂಡಾ ಇದ್ದರು. ದುಷ್ಕರ್ಮಿಗಳು ಬಾಲಕಿಗೆ ಥಳಿಸುತ್ತಿರುವಾಗ ತನ್ನನ್ನು ಬಿಟ್ಟುಬಿಡುವಂತೆ ಕೇಳಿಕೊಂಡಿದ್ದರೂ, ಅಲ್ಲಿರುವ ಯಾರೂ ಕೂಡಾ ಕರುಣೆ ತೋರಿಸಿಲ್ಲ.

ಈ ಬಗ್ಗೆ ಟ್ವಿಟರ್‌ನಲ್ಲಿ ಆಕ್ರೊಶ ವ್ಯಕ್ತವಾಗಿದ್ದು, “ಯುಪಿ ದಲಿತರಿಗೆ ಭಯಾನಕ ಸ್ಥಳವಾಗಿದ್ದು, ಭಾರತದ ಜಾತೀಯತೆಯನ್ನು ಹೊಡೆದೋಡಿಸಲು ಈಗ ಅಂತಾರಾಷ್ಟ್ರೀಯ ಹಸ್ತಕ್ಷೇಪ ಅನಿವಾರ್ಯವಾಗಿದೆ” ಎಂದು ಮಿಷನ್‌ ಅಂಬೇಡ್ಕರ್‌‌ನ ಅಧೀಕೃತ ಖಾತೆ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳು ಹಿನ್ನೆಲೆಗೆ ಸರಿದು, ದುರ್ಬಲರ ಮೇಲೆ ಪ್ರಬಲರು ದೌರ್ಜನ್ಯ ಎಸಗುವ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವುದು ಶುಬ ಸೂಚನೆ ಅಲ್ಲ.
    ಆರೋಪಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...