Homeಮುಖಪುಟಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

ಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆಯ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಗೋಹತ್ಯೆ ಮಾಡಿದ ಆರೋಪದ ಮೇಲೆ  ಬಜರಂಗದಳದ ಮೊರಾದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ ನಾಲ್ವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೊರಾದಾಬಾದ್ ಜಿಲ್ಲೆಯ ಚೇತ್ರಂಪುರ ಗ್ರಾಮದ ಶಹಾಬುದ್ದೀನ್, ಬಜರಂಗದಳದ ಮುಖಂಡ ಮೋನು ಬಿಷ್ಣೋಯ್ ಅಲಿಯಾಸ್ ಸುಮಿತ್ ಮತ್ತು ಆತನ ಸಹಚರರಾರ ರಮಣ್ ಚೌಧರಿ ಮತ್ತು ರಾಜೀವ್ ಚೌಧರಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ ಶಹಾಬುದ್ದೀನ್‌ಗೆ, ಮಕ್ಸೂದ್‌ ಎಂಬಾತನ ಜೊತೆ ವೈಯಕ್ತಿಕ ವೈಷಮ್ಯ ಇತ್ತು. ಈತ ಬಜರಂಗ ದಳದ ಕಾರ್ಯಕರ್ತರ ಸಹಾಯವನ್ನು ಪಡೆದು ಗೋಹತ್ಯೆ ಕೇಸ್‌ನಲ್ಲಿ ಮಕ್ಸೂದ್‌ ಎಂಬಾತನನ್ನು ಜೈಲಿಗೆ ಕಳುಹಿಸಿದ್ದಾನೆ. ಹರಿದ್ವಾರಕ್ಕೆ ಹೋಗಲು ಶ್ರಾವಣ ಮಾಸದಲ್ಲಿ ಹಿಂದೂ ಯಾತ್ರಿಕರು ಹೆಚ್ಚಾಗಿ ಬಳಸುವ ರಸ್ತೆಯಾದ ಕನ್ವರ್ ಪಥ್‌ನಿಂದ ಜನವರಿ 16ರಂದು ಹಸುವಿನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರ ನಂತರ ಜನವರಿ 28ರ ರಾತ್ರಿ ಗೋಹತ್ಯೆಯ ಮತ್ತೊಂದು ಘಟನೆ ಕೆಲವು ಕಿಲೋಮೀಟರ್ ದೂರದಲ್ಲಿರುವ ಚೆತ್ರಾಮ್‌ಪುರ ಗ್ರಾಮದಲ್ಲಿ ನಡೆದಿದೆ. ಎರಡೂ ಘಟನೆಗಳು ಅನುಮಾನಾಸ್ಪದ ಮತ್ತು ಪರಸ್ಪರ ಸಂಬಂಧವನ್ನು ಹೊಂದಿರುವಂತೆ ಕಂಡು ಬಂದಿತ್ತು. ಇದು ಕೇವಲ ಗೋಹತ್ಯೆಯ ಪ್ರಕರಣವಲ್ಲ, ಖಂಡಿತವಾಗಿಯೂ ಅದರಲ್ಲಿ ಕೆಲವು ಹಿಡನ್ ಅಜೆಂಡಾ ಇದೆ ಎಂಬ ಅನುಮಾನವಿತ್ತು ಎಂದು ಮೊರಾದಾಬಾದ್‌ನ ಪೊಲೀಸ್‌ ಅಧೀಕ್ಷಕ ಹೇಮರಾಜ್ ಮೀನಾ ಹೇಳಿದ್ದಾರೆ.

ಎರಡನೇ ಘಟನೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿಯ ಪ್ಯಾಂಟ್ ಮತ್ತು ಮಕ್ಸೂದ್ ಅವರ ಫೋಟೋ ಇರುವ ವ್ಯಾಲೆಟ್ ಪತ್ತೆಯಾಗಿದೆ. ಈ ಬಗ್ಗೆ ಮಕ್ಸೂದ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಗ್ರಾಮದ ಕೆಲವು ಜನರೊಂದಿಗೆ ದ್ವೇಷವನ್ನು ಹೊಂದಿದ್ದರು ಎಂದು ಹೇಳಿದ್ದಾರೆ. ಈ ಕಾರಣದಿಂದಾಗಿ ಆತನ ವಿರುದ್ಧ ಪಿತೂರಿ ನಡೆಸಿರುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಶಹಾಬುದ್ದೀನ್ ಹೆಸರನ್ನು ಮಕ್ಸೂದ್‌ ಹೇಳಿದ್ದಾರೆ. ಶಹಾಬುದ್ದೀನ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಮೋನು ಬಿಷ್ಣೋಯ್, ರಾಜೀವ್ ಚೌಧರಿ ಮತ್ತು ರಮಣ್ ಚೌಧರಿ ಅವರ ಸಹಾಯವನ್ನು ಪಡೆದು ಕೃತ್ಯವನ್ನು ನಡೆಸಿರುವುದು ಬಹಿರಂಗವಾಗಿದೆ ಎಂದು ಹೇಮರಾಜ್ ಮೀನಾ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಮೋನು ಬಿಷ್ಣೋಯ್‌ ಕೊಲೆ ಯತ್ನ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ. ಜೈಲಿನಿಂದ ಬಂದ ಈತ ಛಜ್ಲೈತ್ ಠಾಣೆಯ ಪೊಲೀಸರಿಗೆ ತನ್ನ ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲಿಸುವಂತೆ ಒತ್ತಾಯಿಸುತ್ತಿದ್ದ. ಅಧಿಕಾರಿಗಳು ಈತನ ಮಾತನ್ನು ನಿರಾಕರಿಸಿದಾಗ ಅವರ ವಿರುದ್ಧ ಸಂಚು ರೂಪಿಸಿದ್ದಾನೆ. ಮೊದಲು ಅವರು ಜನವರಿ 14ರಂದು ಶಹಾಬುದ್ದೀನ್ ಸಹಚರ ನಯೀಮ್‌ಗೆ 2,000ರೂ.ನೀಡಿ ಕೃತ್ಯಕ್ಕೆ ತಂತ್ರವನ್ನು ರೂಪಿಸಿದ್ದರು. ಹಸುವಿನ ತಲೆಯನ್ನು ತಂದು ಛಜಲೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡುವಂತೆ ಹೇಳಿದ್ದ. ಯಾರದೋ ಮನೆಯಿಂದ ಹಸುವನ್ನು ಕದ್ದು, ಅದನ್ನು ಕೊಂದು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್‌ಎಸ್‌ಪಿ ಮೀನಾ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿಸಿಟಿವಿ, ಮೊಬೈಲ್ ನೆಟ್‌ವರ್ಕ್‌ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಕೃತ್ಯವನ್ನು ಬಯಲು ಮಾಡಿದ್ದಾರೆ. ಮೊರಾದಾಬಾದ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ(ಕ್ರಿಮಿನಲ್ ಪಿತೂರಿ), 211 , 380 457  ಮತ್ತು 411 ಮತ್ತು ಗೋಹತ್ಯೆ ಕಾಯಿದೆಯ ಸೆಕ್ಷನ್‌ಗಳಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.

ಇದನ್ನು ಓದಿ: ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...