Homeಮುಖಪುಟಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

ಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

- Advertisement -
- Advertisement -

ಕ್ಷೌರಕ್ಕಾಗಿ ಮನೆಗೆ ಕ್ಷೌರಿಕ ತಡವಾಗಿ ಬಂದ ಎಂದು ಪೊಲೀಸ್‌ ಅಧಿಕಾರಿಯೋರ್ವ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಬುದೌನ್‌ನ ಪೊಲೀಸ್ ಠಾಣೆಯೊಂದರಲ್ಲಿ ನಡೆದಿದೆ.

ಸರ್ಕಲ್ ಆಫೀಸರ್(ಸಿಒ) ಸುನೀಲ್ ಕುಮಾರ್ ಅವರು ಕ್ಷೌರಿಕ ವಿನೋದ್ ಕುಮಾರ್ ಅವರನ್ನು ತಮ್ಮ ಮನೆಗೆ ಕ್ಷೌರ ಮಾಡಲು ಕರೆದಿದ್ದರು. ಆದರೆ ಕಾರಣಾಂತರಗಳಿಂದ ಅವರು ತಡವಾಗಿ ಬಂದಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ಸರ್ಕಲ್ ಆಫೀಸರ್ ಸುನೀಲ್ ಕುಮಾರ್ ಕ್ಷೌರಿಕ ವಿನೋದ್ ಕುಮಾರ್‌ಗೆ ಲಾಕಪ್‌ನಲ್ಲಿ ಇರಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಂತ್ರಸ್ತನ ಸಹೋದರ ಶಿವಕುಮಾರ್, ವಿನೋದ್‌ಗೆ ಕ್ಷೌರ ಮಾಡಲು ಇತರ ಗ್ರಾಹಕರು ಇದ್ದ ಕಾರಣ ಸರ್ಕಲ್ ಆಫೀಸರ್ ಅವರ ನಿವಾಸವನ್ನು ತಲುಪಲು ಸ್ವಲ್ಪ ತಡವಾಯಿತು. ಕೆಲವು ಗಂಟೆಗಳ ನಂತರ ಕೆಲವು ಪೊಲೀಸ್ ಸಿಬ್ಬಂದಿ ನಮ್ಮ ಅಂಗಡಿಗೆ ಬಂದರು. ಅವರು ಅಂಗಡಿಯನ್ನು ಮುಚ್ಚಿ  ವಿನೋದ್‌ನ್ನು ಬಿಸೌಲಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದು, ಬುಧವಾರ ಮಧ್ಯಾಹ್ನದವರೆಗೂ ಅವರು ವಿನೋದ್‌ನನ್ನು ಲಾಕ್‌ಅಪ್‌ನಲ್ಲಿ ಇರಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ಪ್ರತಿಕ್ರಿಯಿಸಿದ್ದು, ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಘಟನೆಯ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್‌ ಅಧಿಕಾರಿಯ ನಡೆಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದೆ.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...