Homeಮುಖಪುಟಆದಿತ್ಯನಾಥ್‌ ಅವರನ್ನು ‘ವಿಷ’ ಎಂದು ಉಲ್ಲೇಖಿಸಿದ ಯುಪಿ BJP ಕಾರ್ಯಕಾರಿಣಿ ಸದಸ್ಯ!

ಆದಿತ್ಯನಾಥ್‌ ಅವರನ್ನು ‘ವಿಷ’ ಎಂದು ಉಲ್ಲೇಖಿಸಿದ ಯುಪಿ BJP ಕಾರ್ಯಕಾರಿಣಿ ಸದಸ್ಯ!

- Advertisement -
- Advertisement -

ಆದಿತ್ಯನಾಥ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಮತ್ತೆ ಸನ್ಯಾಸಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಬುಧವಾರ ವಾಗ್ದಾಳಿ ನಡೆಸಿದ್ದಾರೆ. “ವಿಷ (ತೇಝಬ್) ವನ್ನು ಅಮೃತ ಎಂದು ಕರೆಯಲು ನನಗೆ ಸಾಧ್ಯವಿಲ್ಲ” ಎಂದು ಗೋರಖ್‌ಪುರದ ಗೋರಖನಾಥ ದೇವಾಲಯದ ಪ್ರಧಾನ ಅರ್ಚಕರೂ ಆಗಿರುವ ಸಿಎಂ ಆದಿತ್ಯನಾಥ್‌ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಆದಿತ್ಯನಾಥ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಅವರು ತಕ್ಷಣವೇ ಕೋಪಗೊಂಡು ಸನ್ಯಾಸಿ ಆಗಲಿದ್ದಾರೆ ಎಂದು ರಾಮ್‌ ಇಕ್ಬಾಲ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ಹಿಂದೆ ಸಚಿವ ಅಜಯ್ ಮಿಶ್ರಾ: ಯುಪಿ ಬಿಜೆಪಿ ನಾಯಕನ ಆರೋಪ

ಹಣದುಬ್ಬರದಿಂದಾಗಿ ಕೃಷಿ ವೆಚ್ಚ ಸಾಕಷ್ಟು ಹೆಚ್ಚಾಗಿದೆ ಎಂದು ರಾಮ್ ಸಿಂಗ್‌ ರೈತರ ಸಂಕಷ್ಟದ ಬಗ್ಗೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಹಲ್‌ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಅವರನ್ನು ಹೊಗಳಿದ ರಾಮ್‌ ಸಿಂಗ್‌‌, ಅವರನ್ನು ‘ರಾಜಭರ್ ಸಮುದಾಯದ ಏಕೈಕ ನಾಯಕ’ ಎಂದು ಬಣ್ಣಿಸಿದ್ದಾರೆ.

ರಾಮ್‌ ಸಿಂಗ್ ಈ ಹಿಂದೆ ಉತ್ತರ ಪ್ರದೇಶದ ಆದಿತ್ಯನಾಥ್‌ ಸರ್ಕಾರವನ್ನು ಟೀಕಿಸಿದ್ದರು, ಜೊತೆಗೆ ಕೊರೊನಾ ಅಲೆಯನ್ನು ನಿರ್ವಹಿಸಿರುವ ಬಗ್ಗೆಯು ಅವರು ಪ್ರಶ್ನೆ ಮಾಡಿದ್ದರು. ಕಳೆದ ತಿಂಗಳು ಲಖಿಂಪುರ ಖೇರಿ ಘಟನೆಯಲ್ಲಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...