Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...