Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...