Homeಮುಖಪುಟಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಯಾವುದೆ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಕಾಂಗ್ರೆಸ್ ಗುರುವಾರ ಘೋಷಿಸಿದೆ. ಪಕ್ಷವು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ಹೇಳಿದೆ. ಯುಪಿ ಉಪ ಚುನಾವಣೆ

ಕಾಂಗ್ರೆಸ್‌ನ ಉತ್ತರ ಪ್ರದೇಶ ಮುಖ್ಯಸ್ಥ ಅಜಯ್ ರೈ ಅವರೊಂದಿಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಅಥವಾ ಇತರ ಇಂಡಿಯಾ ಮೈತ್ರಿಯ ಪಕ್ಷಗಳ ಗೆಲುವಿಗೆ ಬೇಷರತ್ತಾಗಿ ಶ್ರಮಿಸುತ್ತಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ರಾಜಕೀಯ ಸನ್ನಿವೇಶಗಳಲ್ಲಿ ಪಕ್ಷದ ಸಂಘಟನೆ ಅಥವಾ ಪಕ್ಷವನ್ನು ಬಲಪಡಿಸುವ ಸಮಯ ಅಲ್ಲ, ಬದಲಾಗಿ ಸಂವಿಧಾನವನ್ನು ರಕ್ಷಿಸುವ ಸಮಯವಾಗಿದೆ ಅವರು ಹೇಳಿದ್ದಾರೆ. ಯುಪಿ ಉಪ ಚುನಾವಣೆ

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ, ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾಜವಾದಿ ಪಕ್ಷದ ನಾಯಕತ್ವದೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವಿನಾಶ್ ಪಾಂಡೆ ಹೇಳಿದ್ದಾರೆ.

ಉತ್ತರ ಪ್ರದೇಶದ ಎಲ್ಲಾ ಇಂಡಿಯಾ ಮೈತ್ರಿಯ ಅಭ್ಯರ್ಥಿಗಳು ಸಮಾಜವಾದಿ ಪಕ್ಷದ ಚಿಹ್ನೆಯಾದ ‘ಸೈಕಲ್’ ಚುನಾವಣಾ ಚಿಹ್ನೆಯ ಮೇಲೆ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ ಒಂದು ದಿನದ ನಂತರ ಕಾಂಗ್ರೆಸ್ ಅದನ್ನು ಸಮರ್ಥಿಸಿಕೊಂಡಿದೆ.

ಆದಾಗ್ಯೂ, ಅಭ್ಯರ್ಥಿ ಮತ್ತು ಚಿಹ್ನೆ ಎರಡೂ ಸಮಾಜವಾದಿ ಪಕ್ಷ ಅಥವಾ ಇತರ ಯಾವುದೇ ಇಂಡಿಯಾ ಮೈತ್ರಿಯ ಪಕ್ಷದ್ದಾಗಿರುತ್ತದೆ, ಕಾಂಗ್ರೆಸ್‌ನದ್ದಲ್ಲ ಎಂದು ಪಾಂಡೆ ಸ್ಪಷ್ಟಪಡಿಸಿದ್ದಾರೆ. ಮೈತ್ರಿಯ ನಿರ್ಧಾರವನ್ನು ಯಾವುದೇ ಸೀಟು ಹಂಚಿಕೆ ಲೆಕ್ಕದಲ್ಲಿ ಮಾಡಲಾಗಿಲ್ಲ, ಗೆಲುವಿನ ಲೆಕ್ಕಾಚಾರದಲ್ಲಿ ಮಾಡಲಾಗಿದೆ ಎಂದು ಅಖಿಲೇಶ್ ಯಾದವ್ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

“ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಒಗ್ಗಟ್ಟಾಗಿದ್ದು, ದೊಡ್ಡ ಗೆಲುವಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಈ ಉಪಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆಲುವಿನ ಹೊಸ ಅಧ್ಯಾಯವನ್ನು ಬರೆಯಲಿದೆ” ಎಂದು ಅಖಿಲೇಶ್ ಬುಧವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಖಿಲೇಶ್ ಅವರು ಗುರುವಾರ X ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಚಿತ್ರವನ್ನು ಹಂಚಿಕೊಂಡಿದ್ದು, ಸಂವಿಧಾನ, ಮೀಸಲಾತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ರಕ್ಷಿಸಲು ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದ ಕತೇಹಾರಿ, ಕರ್ಹಾಲ್, ಮೀರಾಪುರ್, ಘಾಜಿಯಾಬಾದ್, ಮಜವಾನ್, ಸಿಸಮಾವು, ಖೈರ್, ಫುಲ್ಪುರ್ ಮತ್ತು ಕುಂದರ್ಕಿ ಸೇರಿ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...