ಉತ್ತರ ಪ್ರದೇಶ ವಿಧಾನಸಭೆಯ ಉಪಚುನಾವಣೆಯಲ್ಲಿ ಮತದಾರರ ಗುರುತಿನ ಚೀಟಿ ಪರಿಶೀಲನೆ ವೇಳೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಚುನಾವಣಾ ಆಯೋಗ (ಇಸಿ) ಇಂದು (ನ.20) ಆದೇಶಿಸಿದೆ ಎಂದು ವರದಿಯಾಗಿದೆ.
ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಎರಡರಿಂದಲೂ ಮತದಾರಿಗೆ ಮತ ಚಲಾಯಿಸಲು ಅಡ್ಡಿಪಡಿಸಲಾಗುತ್ತಿದೆ ಮತ್ತು ಮತದಾನ ಕೇಂದ್ರಗಳಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರ ಆರೋಪಗಳನ್ನು ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.
मैनपुरी की करहल विधानसभा में पुलिस इंस्पेक्टर ललित भाटी द्वारा फोर्स के साथ गश्त के नाम मतदाताओं में फैलाया जा रहा भय जिससे मतदान हो प्रभावित।
संज्ञान ले चुनाव आयोग, निष्पक्ष मतदान सुनिश्चित हो।@ecisveep @ceoup @dmmainpuri pic.twitter.com/Jm8WqyrOEm
— Samajwadi Party (@samajwadiparty) November 20, 2024
ಮುಝಾಫರ್‌ನಗರ ಸೇರಿದಂತೆ ವಿವಿದೆಡೆ ಜನರು ಮತದಾನ ಮಾಡದಂತೆ ಪೊಲೀಸ್ ಸಿಬ್ಬಂದಿ ತಡೆಯುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಮತದಾರಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷ ಆರೋಪಿಸಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮತ್ತು ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದ್ದರು. ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮತದಾನಕ್ಕೆ ಅಡ್ಡಿಪಡಿಸಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.
अगर निर्वाचन आयोग का कोई जीता-जागता अस्तित्व है तो वो जीवंत होकर, प्रशासन के द्वारा वोटिंग को हतोत्साहित करने के लिए तुरंत सुनिश्चित करे:
– लोगों की आईडी पुलिस चेक न करे।
– रास्ते बंद न किये जाएं।
– वोटर्स के आईडी ज़ब्त न किये जाएं।
– असली आईडी को नक़ली आईडी बताकर जेल… pic.twitter.com/4Qddtlgc19— Akhilesh Yadav (@yadavakhilesh) November 20, 2024
ಕೆಲ ವರದಿಗಳ ಪ್ರಕಾರ, ಸುಮಾರು 7 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶಿಸಿದೆ. ಅಮಾನತುಗೊಂಡ 7 ಅಧಿಕಾರಿಗಳಲ್ಲಿ ಕಾನ್ಪುರ ಜಿಲ್ಲೆ ಮತ್ತು ಮುಜಾಫರ್ ನಗರ ಜಿಲ್ಲೆಯ ತಲಾ ಇಬ್ಬರು ಮತ್ತು ಮೂವರು ಮೊರಾದಾಬಾದ್‌ನವರು ಎಂದು ತಿಳಿದು ಬಂದಿದೆ.
ಯಾವುದೇ ಅರ್ಹ ಮತದಾರರನ್ನು ಮತದಾನದಿಂದ ತಡೆಯಬಾರದು. ಮತದಾನದ ಸಮಯದಲ್ಲಿನ ಯಾವುದೇ ರೀತಿಯ ಪಕ್ಷಪಾತೀಯ ಧೋರಣೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ದೂರು ಸ್ವೀಕರಿಸಿದ ತಕ್ಷಣ ತನಿಖೆ ನಡೆಸಲಾಗುವುದು. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ : ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ


