Homeಮುಖಪುಟಚುನಾವಣೆ ವೇಳೆ ನಿಯಮ ಉಲ್ಲಂಘನೆ : ಯುಪಿ ಪೊಲೀಸರು ಅಮಾನತು

ಚುನಾವಣೆ ವೇಳೆ ನಿಯಮ ಉಲ್ಲಂಘನೆ : ಯುಪಿ ಪೊಲೀಸರು ಅಮಾನತು

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭೆಯ ಉಪಚುನಾವಣೆಯಲ್ಲಿ ಮತದಾರರ ಗುರುತಿನ ಚೀಟಿ ಪರಿಶೀಲನೆ ವೇಳೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸುವಂತೆ ಚುನಾವಣಾ ಆಯೋಗ (ಇಸಿ) ಇಂದು (ನ.20) ಆದೇಶಿಸಿದೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಎರಡರಿಂದಲೂ ಮತದಾರಿಗೆ ಮತ ಚಲಾಯಿಸಲು ಅಡ್ಡಿಪಡಿಸಲಾಗುತ್ತಿದೆ ಮತ್ತು ಮತದಾನ ಕೇಂದ್ರಗಳಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರ ಆರೋಪಗಳನ್ನು ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಮುಝಾಫರ್‌ನಗರ ಸೇರಿದಂತೆ ವಿವಿದೆಡೆ ಜನರು ಮತದಾನ ಮಾಡದಂತೆ ಪೊಲೀಸ್ ಸಿಬ್ಬಂದಿ ತಡೆಯುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಮತದಾರಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷ ಆರೋಪಿಸಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಮತ್ತು ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು ಎಂದು ಅಖಿಲೇಶ್ ಯಾದವ್ ಒತ್ತಾಯಿಸಿದ್ದರು. ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮತದಾನಕ್ಕೆ ಅಡ್ಡಿಪಡಿಸಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.

ಕೆಲ ವರದಿಗಳ ಪ್ರಕಾರ, ಸುಮಾರು 7 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶಿಸಿದೆ. ಅಮಾನತುಗೊಂಡ 7 ಅಧಿಕಾರಿಗಳಲ್ಲಿ ಕಾನ್ಪುರ ಜಿಲ್ಲೆ ಮತ್ತು ಮುಜಾಫರ್ ನಗರ ಜಿಲ್ಲೆಯ ತಲಾ ಇಬ್ಬರು ಮತ್ತು ಮೂವರು ಮೊರಾದಾಬಾದ್‌ನವರು ಎಂದು ತಿಳಿದು ಬಂದಿದೆ.

ಯಾವುದೇ ಅರ್ಹ ಮತದಾರರನ್ನು ಮತದಾನದಿಂದ ತಡೆಯಬಾರದು. ಮತದಾನದ ಸಮಯದಲ್ಲಿನ ಯಾವುದೇ ರೀತಿಯ ಪಕ್ಷಪಾತೀಯ ಧೋರಣೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ದೂರು ಸ್ವೀಕರಿಸಿದ ತಕ್ಷಣ ತನಿಖೆ ನಡೆಸಲಾಗುವುದು. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ : ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...