Homeರಾಷ್ಟ್ರೀಯಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇವಲ ಒಂಬತ್ತು ಮಂದಿ ಬೇರೊಂದು ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ ಎಂದು ಪ್ರಶ್ನಿಸಲಾಗಿದೆ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರಿಯ ಪೊಲೀಸ್ ಅಧೀಕ್ಷಕರನ್ನು (ಎಸ್‌ಎಸ್‌ಪಿ) ಸಂಪರ್ಕಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ಜನರು ದೂರಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಲಾಯಿತು” ಎಂದು ಸಂತ್ರಸ್ತರು ಆರೋಪಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶುಕ್ರವಾರ ಬಿಜೆಪಿ ನಾಯಕನೊಂದಿಗೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಜನರು, ಆರೋಪಿಗಳು ಧಾರ್ಮಿಕ ಮತಾಂತರಕ್ಕಾಗಿ ಹಣ ಮತ್ತು ಆಹಾರದ ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ದೇವತೆಗಳ ವಿಗ್ರಹಗಳು, ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ತೆಗೆದು ಕ್ರಿಶ್ಚಿಯನ್ ಧರ್ಮ ಸ್ವೀಕರಿಸುವಂತೆ ಗ್ರಾಮಸ್ಥರನ್ನು ಒತ್ತಾಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!

“ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಯಿತು. ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸುವಂತೆ ಕೇಳಲಾಯಿತು. ದೀಪಾವಳಿಯ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ನೀವು ನಿಮ್ಮ ಧರ್ಮವನ್ನು ಪರಿವರ್ತಿಸಿದ್ದರೂ ನೀವು ಯಾಕೆ ಹೀಗೆ ಮಾಡುತ್ತಿದ್ದೀರಿ? ಎಂದು ಅವರು ಕೇಳಿದ್ದಾರೆ. ನಾವು ಇದನ್ನು ವಿರೋಧಿಸಿದಾಗ ಅವರು ನಮಗೆ ಜೀವ ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಎಫ್‌ಐಆರ್‌ನಲ್ಲಿ ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ ಎಂದು ಗುರುತಿಸಲಾಗಿದೆ.

ಎಸ್ಪಿ ಪಿಯೂಷ್ ಸಿಂಗ್ ಮಾತನಾಡಿ,‘‘ಶುಕ್ರವಾರ ಕೆಲವರು ನಮ್ಮ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದ್ದು, ಇತರೆ ಧರ್ಮದವರು ಮಾಳಿನ್ ಗ್ರಾಮದ ಜನರ ಧರ್ಮವನ್ನು ಬಲವಂತವಾಗಿ ಮತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು,“ಒಂಬತ್ತು ಜನರು ತಮ್ಮದಲ್ಲದ ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ” ಎಂದು ಪ್ರಶ್ನಿಸಿದ್ದಾರೆ.

“ಅಷ್ಟಕ್ಕೂ ಧರ್ಮ ಎಂಬುವುದು ಮನಸ್ಸಿನಲ್ಲಿರುವ ನಂಬಿಕೆಯ ವಿಷಯವಾಗಿದೆ, ಹೀಗಿರುವಾಗ ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡಲು ಹೇಗೆ ಸಾಧ್ಯವಿದೆ?. ಅದರಲ್ಲೂ ನಾಲ್ನೂರು ಜನರೊಂದಿಗೆ ಒಂಬತ್ತು ಜನರು ಬಂದು ನೀವೆಲ್ಲಾ ಮತಾಂತರವಾಗಿ ಎಂದು ಒತ್ತಾಯ ಮಾಡಲು ಸಾಧ್ಯವೆ? ಇದು ಒಂದು ಷಡ್ಯಂತ್ರ” ಎಂದು ಅವರು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...