ಪ್ರಯಾಗ್‌ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆ) ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
“ಯುಪಿ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುತ್ತಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸಿ, ಅವರ ಮನೆಗಳನ್ನು ಕೆಡವುತ್ತಾರೆಯೇ?” ಎಂದು ಗುಜರಾತ್‌ನ ಕಚ್‌ನಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಓವೈಸಿ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಪ್ರಯಾಗ್‌ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ಅವರ ಮನೆಯನ್ನು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.
ಆರೋಪಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆಯೂ ಹೌದು. ಕಳೆದ ವರ್ಷ ಸಿಎಎ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು ಫಾತಿಮಾ. ಇತ್ತೀಚಿನ ಹಿಂಸಾಚಾರದಲ್ಲಿ ಅಫ್ರಿನ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ಗಳಿವೆ. ಧ್ವಂಸಕ್ಕೂ ಮುನ್ನ ಭಾನುವಾರ ಬೆಳಗ್ಗೆ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘12 ಬೋರ್’ ಅಕ್ರಮ ಪಿಸ್ತೂಲ್, ‘315 ಬೋರ್’ ಪಿಸ್ತೂಲ್ ಹಾಗೂ ಗೌರವಾನ್ವಿತ ನ್ಯಾಯಾಲಯದ ವಿರುದ್ಧ ಆಕ್ಷೇಪಾರ್ಹ ಅಭಿಪ್ರಾಯಗಳನ್ನು ತೋರಿಸುವ ಕೆಲವು ದಾಖಲೆಗಳನ್ನು ಪತ್ತೆಹಚ್ಚಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಹೇಳಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ ಎಂದು ಆರೋಪಿಸಿ ಅವರ ಮನೆಯ ಹೊರಗೆ ನೋಟಿಸ್ ಅಂಟಿಸಿದ ಬಳಿಕ ಕಟ್ಟಡ ಕೆಡವಲಾಯಿತು. ಕಟ್ಟಡ ನೆಲಸಮಗೊಳಿಸುವ ಆದೇಶವನ್ನು ಮೇ ತಿಂಗಳಲ್ಲಿಯೇ ಕಳುಹಿಸಲಾಗಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.
“ಜೂನ್ 9ರೊಳಗೆ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವಂತೆ ಮೊಹಮ್ಮದ್ ಅವರಿಗೆ ತಿಳಿಸಲಾಯಿತು. ವಿಫಲವಾದರೆ ಜೂನ್ 12ರಂದು ಬೆಳಿಗ್ಗೆ 11 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡುವಂತೆ ಅವರಿಗೆ ಸೂಚಿಸಲಾಗಿದೆ” ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು
ಜಾವೇದ್ ಮೊಹಮ್ಮದ್ ಅವರ ವಕೀಲರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, ಪಿಡಿಎ ಪ್ರತಿಪಾದನೆಯನ್ನು ಅಲ್ಲಗಳೆದಿದ್ದಾರೆ. ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ. ಮನೆಯು ಜಾವೇದ್ ಅವರ ಪತ್ನಿಯ ಹೆಸರಲ್ಲಿದ್ದು, ಅಕ್ರಮ ನಿರ್ಮಾಣದ ಬಗ್ಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಆದರೆ ಪ್ರತಿಭಟನೆಗಳು ಹಿಂಸೆಗೆ ತಿರುಗಿದವು.
ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಬುಲ್ಡೋಸ್’ ರಾಜಕೀಯ ಮಾಡುತ್ತಿದ್ದಾರೆಂಬ ಆರೋಪಗಳು ಬಂದಿವೆ.



UP ಸರ್ಕಾರ ಓವೈಸಿ ಪಾಲಿನ ಯಮ ಇದ್ದಂತೆ ,ಮಾತಾಡಿದರೆ ಹೆಣಬೀಳುತ್ತೇ, ಜೈ ಹಿಂದೂ ರಾಷ್ಟ್ರ
One day you will be a victim of Hindurastra