Homeಮುಖಪುಟತನ್ನ ವಿರುದ್ಧದ ಪ್ರಕರಣಗಳನ್ನು ತಾನೇ ಹಿಂಪಡೆದ ಯುಪಿ ಸಿಎಂ ಯೋಗಿ ಆದಿತ್ಯನಾಥ್: BSP ಸಂಸದನ ಆರೋಪ

ತನ್ನ ವಿರುದ್ಧದ ಪ್ರಕರಣಗಳನ್ನು ತಾನೇ ಹಿಂಪಡೆದ ಯುಪಿ ಸಿಎಂ ಯೋಗಿ ಆದಿತ್ಯನಾಥ್: BSP ಸಂಸದನ ಆರೋಪ

ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳು ಮುಗಿದ ನಂತರ ಬಿಜೆಪಿ ಸರ್ಕಾರ ಉತ್ತರ ಪ್ರದೇಶವನ್ನು ನಾಲ್ಕು ಭಾಗಗಳಾಗಿ ವಿಭಜಿಸುತ್ತದೆ - ಅಫ್ಜಲ್ ಅನ್ಸಾರಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ವಿರುದ್ಧದ ಪ್ರಕರಣಗಳನ್ನು ತಾವೇ ಹಿಂಪಡೆಯುತ್ತಿದ್ದಾರೆ ಎಂದು ಗಾಜಿಪುರ ಬಿಎಸ್ಪಿ ಸಂಸದ ಅಪ್ಜಲ್ ಅನ್ಸಾರಿ ಆರೋಪಿಸಿದ್ದಾರೆ.

ಶುಕ್ರವಾರ ಸಂಜೆ ಬಲಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ಹೊಡಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಮೂಲಕ ಅವರು “ಮಿಸ್ಟರ್ ಕ್ಲೀನ್” ಆಗಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

“ಯೋಗಿಜಿಯವರು ತಮ್ಮ ಸರ್ಕಾರ ಮಾಫಿಯಾದ ಮೇಲೆ ಬುಲ್ಡೋಜರ್‌ಗಳನ್ನು ಉರುಳಿಸುತ್ತಿದೆ ಎಂದು ಹೇಳುತ್ತಾರೆ. ಆದರೆ ಅವರು ತಮ್ಮ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದು ಅನ್ಸಾರಿ ಹೇಳಿದ್ದಾರೆ.

ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಸರ್ವಾಧಿಕಾರದತ್ತ ಸರಿಯುತ್ತಿದೆ. ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳು ಮುಗಿದ ನಂತರ ಬಿಜೆಪಿ ಸರ್ಕಾರ ಉತ್ತರ ಪ್ರದೇಶವನ್ನು ನಾಲ್ಕು ಭಾಗಗಳಾಗಿ ವಿಭಜಿಸುತ್ತದೆ ಎಂದು ಅನ್ಸಾರಿ ಹೇಳಿದ್ದಾರೆ.

“ಮೋದಿ ಸರ್ಕಾರದ ತಪ್ಪು ನೀತಿಗಳಿಂದಾಗಿ, ವಿಶ್ವದಾದ್ಯಂತ ಉದ್ಯೋಗ ಕಳೆದುಕೊಳ್ಳುವ ರಾಷ್ಟ್ರಗಳಲ್ಲಿ ಭಾರತ ಮೊದಲ ಸ್ಥಾನವನ್ನು ತಲುಪಿದೆ. ದೇಶದ ಆರ್ಥಿಕತೆಯೂ ವೇಗವಾಗಿ ಕ್ಷೀಣಿಸುತ್ತಿದೆ ಮತ್ತು ಭಾರತವು 164 ನೇ ಸ್ಥಾನದಲ್ಲಿದೆ ”ಎಂದು ಅವರು ಹೇಳಿದ್ದಾಗಿ ದಿ ಟ್ರಿಬ್ಯೂನ್ ವರದಿ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿದ ಅವರು, ಬಿಜೆಪಿಯ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅದ್ಭುತ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯು ದ್ವೇಷದ ರಾಜಕೀಯದಲ್ಲಿ ತೊಡಗಿದೆ ಮತ್ತು ಸಾಮಾಜಿಕ ಸಾಮರಸ್ಯವನ್ನು “ನಾಶಪಡಿಸುವ” ಮೂಲಕ ದೇಶವನ್ನು 50 ವರ್ಷಗಳಷ್ಟು ಹಿಂದಕ್ಕೆ ತಳ್ಳಲು ಯತ್ನಿಸುತ್ತಿದೆ ಎಂದು ಸಂಸದ ಅಫ್ಜಲ್ ಅನ್ಸಾರಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...