Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...