Homeಮುಖಪುಟಪ್ಯಾಲೆಸ್ತೀನ್‌ ಬೆಂಬಲಿಸಿ ಪೋಸ್ಟ್‌: ಉ.ಪ್ರದೇಶದ ಪೊಲೀಸ್‌ ಕಾನ್‌ಸ್ಟೇಬಲ್‌ ಅಮಾನತು

ಪ್ಯಾಲೆಸ್ತೀನ್‌ ಬೆಂಬಲಿಸಿ ಪೋಸ್ಟ್‌: ಉ.ಪ್ರದೇಶದ ಪೊಲೀಸ್‌ ಕಾನ್‌ಸ್ಟೇಬಲ್‌ ಅಮಾನತು

- Advertisement -
- Advertisement -

ಇಸ್ರೇಲ್-ಹಮಾಸ್‌ ಸಂಘರ್ಷದ ನಡುವೆ ಪ್ಯಾಲೆಸ್ತೀನ್‌ಗೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ ಉತ್ತರ ಪ್ರದೇಶದ ಪೊಲೀಸ್‌ ಕಾನ್‌ಸ್ಟೇಬಲ್‌ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಹಾಗೂ ಅವರ ವಿರುದ್ಧ ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಮಾನತುಗೊಂಡ ಕಾನ್‌ಸ್ಟೇಬಲ್‌ ಸುಹೈಲ್‌ ಅನ್ಸಾರಿ ಎಂದು ಗುರುತಿಸಲಾಗಿದೆ. ಇವರು ಬರೇಲಿ ನಿವಾಸಿಯಾಗಿದ್ದು, ಕೆಲ ತಿಂಗಳ ಹಿಂದೆಯಷ್ಟೇ ಲಖೀಂಪುರ್‌ ಖೇರಿಗೆ ನಿಯೋಜನೆಗೊಂಡಿದ್ದರು.

ಕಾನ್‌ಸ್ಟೇಬಲ್‌ ಶೇರ್‌ ಮಾಡಿದ ಪೋಸ್ಟ್‌ ಕುರಿತಂತೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಭಾರತದ ನಿಲುವಿಗೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ಉನ್ಮಾದವನ್ನುಂಟುಮಾಡಲು ಪ್ರಯತ್ನಿಸುವವರ ವಿರುದ್ಧ “ಕಠಿಣ ಕ್ರಮ” ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ”ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...