Homeನಿಜವೋ ಸುಳ್ಳೋಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

ಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

- Advertisement -
- Advertisement -

ಲಾಕ್‌ಡೌನ್‌ ದಿಗ್ಬಂಧನವನ್ನು ದಾಟಿ ನುಗ್ಗುತ್ತಿರುವ ಯುವಕರ ಮೇಲೆ ಪೊಲೀಸರ ಗುಂಪೊಂದು ಗುಂಡು ಹಾರಿಸುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಆ ವಿಡಿಯೋದಲ್ಲಿ ಕಾರಿನಲ್ಲಿ ನುಗ್ಗಿಬಂದವರ ಮೇಲೆ ಪೊಲೀಸರು ಗುಂಡು ಹಾರಿಸುತ್ತಾರೆ. ನಂತರ ಅವರನ್ನು ಬಂಧಿಸುವ ವೀಡಿಯೊ ಉತ್ತರ ಪ್ರದೇಶದ ಅಯೋಧ್ಯೆ ನಗರದಿಂದ ಬಂದಿದೆ ಎಂದು ಹೇಳಲಾಗಿದೆ.

ಏಪ್ರಿಲ್ 4 ರಂದು ಫೇಸ್‌ಬುಕ್ ಬಳಕೆದಾರ ಶಿವಂಶು ಶುಕ್ಲಾ ಈ ವಿಡಿಯೋವನ್ನು ಪೋಸ್ಟ್ ಮಾಡಿ, “ಈ ಘಟನೆ ಚೋರ್ ಬಜಾರ್‌ನಿಂದ ಬಂದಿದೆ. ಜೈ ಯೋಗಿ ರಾಜ್. ಯುಪಿ ಅಯೋಧ್ಯೆ ಶ್ರೀ ರಾಮನ ಭೂಮಿ ಎಂದು ‘ಜಿಹಾದಿಗಳು’ ನಿಮಗೆ ತಿಳಿದಿರಲಿಲ್ಲ. ಯುಪಿ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ” ಎಂಬ ಟೈಟಲ್‌ ನೀಡಿರುವ ಈ ವೀಡಿಯೊವನ್ನು ಇದುವರೆಗೆ 500 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

चौरे बाजार की घटना जय योगी राज?? जेहादियों क्या तुम्हें नही पता था कि ये UP का अयोध्या मर्यादा पुरुषोत्तम श्री राम की धरातल है God job UP police

Posted by Shivanshu Shukla on Saturday, April 4, 2020

 

ಈ ಪುರುಷರು ‘ಕರೋನಾ ಜಿಹಾದಿಗಳು’ ಎಂದು ಹೇಳಿ ಇದೇ ರೀತಿಯ ಹೇಳಿಕೆಯೊಂದಿಗೆ ವಿಡಿಯೋ ಫೇಸ್‌ಬುಕ್‌ನಲ್ಲಿ ಸಾಕಷ್ಟು ವೈರಲ್ ಆಗಿದೆ.

ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದನ್ನು ಕೊರೋನವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಿದ ನಂತರ, ಮುಸ್ಲಿಂ ಸಮುದಾಯದ ಮೇಲೆ ಎಲ್ಲಾ ಆಪಾದನೆಯನ್ನು ಹೊರಿಸುವ ಪ್ರಯತ್ನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನದ ರೀತಿಯಲ್ಲಿ ನಡೆಯುತ್ತಿದೆ. ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಸೋಂಕನ್ನು ಹರಡಲು ಪ್ರಯತ್ನಿಸುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲು ‘ಕರೋನಾ ಜಿಹಾದ್’ ಮತ್ತು ‘ಕರೋನಾ ಜಿಹಾದಿ’ ಎಂಬ ನುಡಿಗಟ್ಟುಗಳನ್ನು ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಅವಹೇಳನಕಾರಿ ರೀತಿಯಲ್ಲಿ ಬಳಸಿಕೊಂಡಿವೆ.

ಫ್ಯಾಕ್ಟ್-ಚೆಕ್

ಫೇಸ್‌ಬುಕ್ ಬಳಕೆದಾರರಲ್ಲಿ ಕೆಲವು ಬಳಕೆದಾರರು ಈ ವೀಡಿಯೊವನ್ನು ಅಣಕು ಪ್ರದರ್ಶನ ಎಂದು ಹಂಚಿಕೊಂಡಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ ಯೂಟ್ಯೂಬ್ ಹುಡುಕಾಟದೊಂದಿಗೆ, ಏಪ್ರಿಲ್ 4, 2020 ರಂದು ವಿಕೆ ನ್ಯೂಸ್ ಚಾನೆಲ್ ಪೋಸ್ಟ್ ಮಾಡಿದ ಅದೇ ಘಟನೆಯ ಮತ್ತೊಂದು ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ವೀಡಿಯೊ ಯುಪಿ ಸುಲ್ತಾನಪುರ ಗಡಿಯಿಂದ ಬಂದಿದೆ. ಇದು ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನವನ್ನು ತೋರಿಸುತ್ತದೆ.

ವೈರಲ್ ವೀಡಿಯೊದಿಂದ ಸ್ಕ್ರೀನ್‌ಗ್ರಾಬ್‌ನ ಹೋಲಿಕೆ ಮತ್ತು ಯೂಟ್ಯೂಬ್ ವೀಡಿಯೊದ ಫ್ರೇಮ್ ಎರಡೂ ಒಂದೇ ಅಣಕು ಡ್ರಿಲ್ ಅನ್ನು ಚಿತ್ರಿಸುತ್ತದೆ ಎಂದು ಖಚಿತಪಡಿಸುತ್ತದೆ.

ಆಲ್ಟ್ ನ್ಯೂಸ್ ಅಯೋಧ್ಯೆ ಸಿಟಿ ಎಸ್‌ಪಿಯನ್ನು ಸಂಪರ್ಕಿಸಿದಾಗ ಅವರು ಅದು ಕೇವಲ ಪ್ರದರ್ಶನದ ದೃಶ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನದ ವೀಡಿಯೊವನ್ನು ಕೊರೋನವೈರಸ್ ಹರಡುವ ಗುರಿಯನ್ನು ಹೊಂದಿರುವ ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಗಮನಿಸಿ: ಭಾರತದಲ್ಲಿ ಕೊರೋನವೈರಸ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 9,000 ಮೀರಿದೆ ಮತ್ತು 350 ಕ್ಕೂ ಹೆಚ್ಚು ಸಾವುಗಳು ಈವರೆಗೆ ವರದಿಯಾಗಿವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಗತ್ಯ ಸೇವೆಗಳ ಹೊರತಾಗಿ ಚಲನೆಗೆ ಸರ್ಕಾರ ಸಂಪೂರ್ಣ ನಿರ್ಬಂಧ ಹೇರಿದೆ. ಜಾಗತಿಕವಾಗಿ, 18 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಹಾಗಾಗಿ ಈ ವಿಚಾರದಲ್ಲಿ ತಮಾಷೆಗಾಗಿ ಅಥವಾ ಇನ್ನೊಬ್ಬರನ್ನು ಹಳಿಯುವ ಸಲುವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಪರಿಶೀಲಿಸಿದ ನಂತರವೇ ಫಾರ್ವಡ್‌ ಮಾಡಿ.


ಇದನ್ನೂ ಓದಿ :ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....