ಕಳೆದ ವಾರ ಗಲಭೆ ನಡೆದ ಕಾನ್ಪುರಕ್ಕೆ ಭೇಟಿ ನೀಡಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ, ಕೇರಳ ಸಂಸದ ಇ.ಟಿ. ಮೊಹಮ್ಮದ್ ಬಶೀರ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮಕ್ತೂಬ್ ಮಾಧ್ಯಮ ವರದಿ ಮಾಡಿದೆ.
ಪ್ರವಾದಿ ಮೊಹಮ್ಮದ್ ಅವರ ವಿರುದ್ದ ನಿಂದನೆ ಮಾಡಿರುವುದನ್ನು ಪ್ರತಿಭಟಿಸಿದ್ದಕ್ಕಾಗಿ ಪೊಲೀಸರಿಂದ ಗುರಿಯಾಗುತ್ತಿರುವ ಜನರನ್ನು ಭೇಟಿ ಮಾಡಲು ಅವರು ಯುಪಿಗೆ ತೆರಳಿದ್ದರು. ಯುಪಿ ಪೊಲೀಸರು ಅವರನ್ನು ಮತ್ತು ಪಕ್ಷದ ಇತರ ನಾಯಕರನ್ನು ಕಾನ್ಪುರದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಪ್ರವಾದಿ ನಿಂದನೆಯನ್ನು ವಿರೋಧಿಸಿ ಮಾರುಕಟ್ಟೆ ಬಂದ್‌ಗೆ ಕರೆ ನೀಡಿದ್ದಾಗ ಎರಡು ಗುಂಪುಗಳ ನಡುವೆ ಘರ್ಷಣೆ ಪ್ರಾರಂಭವಾಗಿತ್ತು. ಈ ವೇಳೆ ಹಿಂಸಾಚಾರ ಭುಗಿಲೆದ್ದು ಪೊಲೀಸರು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದರು.
ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ
ಈ ಮಧ್ಯೆ, ಕಾನ್ಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಬಂಧಿಸಲ್ಪಟ್ಟಿರುವ ಮುಸ್ಲಿಂ ಯುವಕರ ಕುಟುಂಬಗಳು, ‘‘ಮುಸ್ಲಿಮರು ಎಂಬ ಕಾರಣಕ್ಕಾಗಿ ಹಲವಾರು ಜನರನ್ನು ಪೊಲೀಸರು ಬಂಧಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಘಟನೆಯನ್ನು ಹಿಂದೂ-ಮುಸ್ಲಿಂ ಘರ್ಷಣೆ ಎಂದು ಕರೆಯುತ್ತಿದ್ದರೂ ಪೊಲೀಸರು ಮುಸ್ಲಿಮರನ್ನು ಬಂಧಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ವರೆಗೆ ಕನಿಷ್ಠ 54 ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಹಿಂಸಾಚಾರದ ಆರೋಪ ಹೊರಿಸಿ ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಆರೋಪದ ನಡುವೆ, ಆರೋಪಿಗಳ ಕುಟುಂಬ ಒದಗಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಲು ಪೊಲೀಸರು ಗುರುವಾರ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.
ಇದನ್ನೂ ಓದಿ: ಯುಪಿ: ವೃದ್ಧ ಮುಸ್ಲಿಂ ಬೀದಿಬದಿ ವ್ಯಾಪಾರಿಯನ್ನು ವ್ಯಾಪಾರ ಮಾಡದಂತೆ ತಡೆದ ದುಷ್ಕರ್ಮಿ
ಸಮಿತಿಯಲ್ಲಿ, ಜಂಟಿ ಪೊಲೀಸ್ ಕಮಿಷನರ್ (ಕಾನ್ಪುರ್) ತಿವಾರಿ ನೇತೃತ್ವದ ಸಮಿತಿಯಲ್ಲಿ ಡಿಸಿಪಿ (ಪೂರ್ವ) ಪ್ರಮೋದ್ ಕುಮಾರ್, ಡಿಸಿಪಿ ಪಶ್ಚಿಮ ಬಿಬಿಜಿಟಿಎಸ್ ಮೂರ್ತಿ ಮತ್ತು ಹೆಚ್ಚುವರಿ ಪೊಲೀಸ್ ಕಮಿಷನರ್ ಅಕ್ಮಲ್ ಖಾನ್ ಇದ್ದಾರೆ.


