Homeಮುಖಪುಟಯುಪಿ ಪೊಲೀಸರ ವರ್ತನೆ 'ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ': ಸಂಜಯ್ ರಾವತ್

ಯುಪಿ ಪೊಲೀಸರ ವರ್ತನೆ ‘ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ’: ಸಂಜಯ್ ರಾವತ್

"ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ" ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

- Advertisement -
- Advertisement -

ಹತ್ರಾಸ್ ಪ್ರಕರಣದಲ್ಲಿನ ಕುಟುಂಬಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದ ರಾಹುಲ್ ಗಾಂಧಿಯವರೊಂದಿಗೆ ಅನುಚಿತವಾಗಿ ನಡೆದುಕೊಂಡ ಪೊಲೀಸರ ವರ್ತನೆಯನ್ನು, “ಪ್ರಜಾಪ್ರಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ” ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಬಣ್ಣಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಹುಲ್ ಗಾಂಧಿ ಪ್ರಮುಖ ರಾಜಕೀಯ ಪಕ್ಷದ ನಾಯರಾಗಿದ್ದು, ಅಂತಹವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಹುಲ್ ಗಾಂಧಿಯ ಕೊರಳುಪಟ್ಟಿಯನ್ನು ಹಿಡಿದು ನೆಲಕ್ಕೆ ತಳ್ಳಿದ ರೀತಿ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ. ಈ ಘಟನೆಯನ್ನು ತನಿಖೆ ಮಾಡಬೇಕು. ಯಾರೂ ಪ್ರಶ್ನೆಗಳನ್ನು ಕೇಳಬಾರದು ಎಂದು, ಪ್ರತಿಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಇದೇ ಏನು? ವಾಡಿಕೆಯಂತೆ ನೀವು ಅವರನ್ನು ಅಪಹಾಸ್ಯ ಮಾಡಬಹುದು. ಆದರೆ ಪೊಲೀಸರು ಅವರೊಂದಿಗೆ ವರ್ತಿಸಿದ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ” ಎಂದೂ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ…

“ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

“ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ಹಾಗಾದರೆ ಯುವತಿ ಸಾಯುವ ಮುನ್ನ ಸುಳ್ಳು ಹೇಳಿದ್ದಾಳೆಯೇ?” ಎಂದು ಪ್ರಶ್ನಿಸಿದರು.

ಹತ್ರಾಸ್ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಹೇಳಿದರು. ಇದರ ನಡುವೆ, ಶಿವಸೇನೆ ಕಾರ್ಯಕರ್ತರು ದಕ್ಷಿಣ ಮುಂಬೈನ ಚರ್ಚ್‌ಗೇಟ್ ರೈಲ್ವೆ ನಿಲ್ದಾಣದ ಹೊರಗೆ ಹತ್ರಾಸ್ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

0
ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್...