ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆಯೂ ರಾಜ್ಯದಲ್ಲಿ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಕಾಯ್ದೆಯೂ ದುರ್ಬಳಕೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದೆ.
ಹಲವು ಪ್ರಕರಣಗಳಲ್ಲಿ ಅಧಿಕಾರಿಗಳು ಪತ್ತೆ ಮಾಡಿದ ಮಾಂಸವನ್ನು ಯಾವುದೇ ರೀತಿಯ ವಿಶ್ಲೇಷಣೆ ಮಾಡದೆ ಹಾಗೂ ದೃಢೀಕರಿಸದೆ ಗೋಮಾಂಸ ಎಂದು ಭಾವಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ ಅವರಿದ್ದ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!
ಈ ಕಾಯ್ದೆಯ ಅಡಿಯಲ್ಲಿ ಆರೋಪಿಯಾಗಿರುವ ರಹಮುದ್ದೀನ್ ಸಲ್ಲಿಸಿದ ಮನವಿಯನ್ನು ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್‌ಗೆ ಪೊಲೀಸರ ಎಫ್‌ಐಆರ್‌ನಲ್ಲಿ ಅವರ ವಿರುದ್ಧ ಯಾವುದೇ ರೀತಿಯ ನಿರ್ದಿಷ್ಟ ಆರೋಪ ಇಲ್ಲ, ಗೋಹತ್ಯೆ ನಡೆದ ಸ್ಥಳದಲ್ಲಿ ರಹಮುದ್ದೀನ್ ಇರಲಿಲ್ಲ ಎಂದು ಮನವಿಯಲ್ಲಿ ಹೇಳಲಾಗಿತ್ತು.
ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆಯನ್ನು ಅಮಾಯಕ ವ್ಯಕ್ತಿಗಳ ವಿರುದ್ಧ ದುರ್ಬಳಕೆ ಮಾಡಲಾಗುತ್ತಿದೆ ಎಂದು ಪ್ರತಿಪಾದಿಸಿದ ಹೈಕೋರ್ಟ್ ರಹಮುದ್ದೀನ್‌ಗೆ ಜಾಮೀನು ನೀಡಿದೆ.
ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್


