Homeಮುಖಪುಟಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದ ದೀನದಯಾಳ್ ಉಪಾಧ್ಯಾಯ ಗೋರಖ್‌ಪುರ್ ವಿಶ್ವವಿದ್ಯಾಲಯದ (DDU) ಸ್ಟೋರ್ ರೂಂನಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬರ ಮೃತದೇಹ ನೇಣಿಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

20 ವರ್ಷದ ಪ್ರಿಯಾಂಕಾ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು, ವಿಶ್ವವಿದ್ಯಾಲಯದ ಗೃಹ ವಿಜ್ಞಾನ ವಿಭಾಗಕ್ಕೆ ದಾಖಲಾಗಿದ್ದರು. ಗುಲ್ರಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಸಹಾಬಾಜ್‌ಗಂಜ್ ಪೋಖ್ರೋ ತೋಲಾ ನಿವಾಸಿಯಾದ ಪ್ರಿಯಾಂಕಾ ಶನಿವಾರ ದೀಕ್ಷಾ ಭವನದಲ್ಲಿ ಪರೀಕ್ಷೆಗೆ ಹಾಜರಾಗಲು ಗೋರಖ್‌ಪುರ್ ವಿಶ್ವವಿದ್ಯಾಲಯಕ್ಕೆ ಬಂದಿದ್ದರು.

ಬಳಿಕ ಅವರ ಮೃತದೇಹ ವಿಶ್ವವಿದ್ಯಾಲಯದ ಸ್ಟೋರ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಬಿಎಸ್ಸಿ ಹೋಮ್ ಸೈನ್ಸ್ 3 ನೇ ವರ್ಷದ ಪ್ರಶ್ನೆ ಪತ್ರಿಕೆ, ಆಧಾರ್ ಕಾರ್ಡ್, ಮೊಬೈಲ್ ಇತ್ಯಾದಿಗಳನ್ನು ಒಳಗೊಂಡ ಬ್ಯಾಗ್ ನೋಡಿ ಅವರನ್ನು ಗುರುತಿಸಲಾಗಿದೆ. ನಂತರ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮತ್ತು ಪೊಲೀಸರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು  ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಗೋರಖ್‌ಪುರ ವಿಶ್ವವಿದ್ಯಾಲಯವು ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಕುಖ್ಯಾತವಾಗಿದ್ದು, ಈ ಹಿಂದೆಯೂ ಅನೇಕ ವಿದ್ಯಾರ್ಥಿಗಳು ಇದರ ಬಗ್ಗೆ ದೂರು ನೀಡಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ, ಸರ್ಕಾರ ಮತ್ತು ಪೊಲೀಸರು ಎಲ್ಲರೂ ದಲಿತರ ವಿರುದ್ಧ ಒಟ್ಟಾಗಿ ನಿಲ್ಲುತ್ತಾರೆ ಎಂದು ಆರೋಪಿಸಲಾಗಿದೆ. ಈ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ದಲಿತ ಸಮುದಾಯದಲ್ಲಿ ಕೋಲಾಹಲವನ್ನು ಉಂಟುಮಾಡಿದ್ದು, ನ್ಯಾಯಯುತ ತನಿಖೆ ಮತ್ತು ವಿಚಾರಣೆಗೆ ಆಗ್ರಹ ಮಾಡಲಾಗುತ್ತಿದೆ.

2018 ರಲ್ಲಿ, ದಲಿತ ಸಂಶೋಧನಾ ವಿದ್ಯಾರ್ಥಿ ದೀಪಕ್ ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಸಿಕ್ಕ ವೈದ್ಯಕೀಯ ಸೌಲಭ್ಯಗಳಿಂದಾಗಿ ದೀಪಕ್ ಜೀವ ಉಳಿಸಲಾಗಿತ್ತು. ದೀಪಕ್ ಕುಮಾರ್ ಅವರ ವಿಷಯದಲ್ಲಿ, ಸರ್ಕಾರವು ವಿಶ್ವವಿದ್ಯಾಲಯದ ಆಡಳಿತದೊಂದಿಗೆ ಸೇರಿ ಇಡೀ ಘಟನೆಯನ್ನು ಮುಚ್ಚಿಹಾಕಿತು. ಪ್ರಿಯಾಂಕಾ ಪ್ರಕರಣದಲ್ಲಿ ಇದೇ ರೀತಿಯಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Very sad to hear the shocking news..
    CM of up should take ultimate action without delay,as to order for highest and honest enquire committee available in Indian justice. And see the issues should not repeat as it was repeating since more than decades..All should be treated equally.
    I request the editor to forward or make good positive news about 370 abolition in Kashmir ..and life of origins before and now.
    Has strikes ,roits,terrorists, law of control etc..had come to high or normal or zero ..why wont you share it as good moment by Indian government.
    Thank you

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...