Homeಮುಖಪುಟಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಮತ್ತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಯುಪಿಯ ಬುಲಂದ್‌ಶಹರ್‌ನಲ್ಲಿ ನಡೆದ ‘ಪ್ರತಿಜ್ಞಾ ಸಮ್ಮೇಳನ-ಲಕ್ಷ್ಯ 2022’ ರ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಸಮಾಜವಾದಿ ಪಕ್ಷ ಅಥವಾ ಅಖಿಲೇಶ್ ಯಾದವ್ ಜೊತೆಗಿನ ಮೈತ್ರಿಯ ಬಗ್ಗೆಗಿನ ವದಂತಿಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ಬಿಜೆಪಿಯ ಹಣದುಬ್ಬರ ಮತ್ತು ಲೂಟಿ ನೀತಿಗಳ ವಿರುದ್ಧ ಕಾಂಗ್ರೆಸ್ ತನ್ನ ಸಂಘಟನೆಯ ಬಲದ ಮೇಲೆ 5 ವರ್ಷಗಳ ಕಾಲ ಹೋರಾಡಿದೆ. ಪಕ್ಷವು ಸಂಘಟನೆಯ ಬಲದ ಮೇಲೆ ದೃಢವಾಗಿ ಚುನಾವಣೆ ಎದುರಿಸಲಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.ಶಯ

ಯುಪಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರವು ಇಲ್ಲಿಯವರೆಗೆ ಮಹಿಳೆಯರ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿ ನಡೆಯುತ್ತಿದೆ. ಅವರ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಕಾಂಗ್ರೆಸ್‌ಗೆ ಮತ ನೀಡುವಂತೆ ಪಕ್ಷವು ಒತ್ತಾಯಿಸುತ್ತಿದೆ. ಜೊತಗೆ ಪಕ್ಷದಿಂದ 40% ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೆ ಭರವಸೆ ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಒಟ್ಟುಗೂಡಿಸಲು ಶ್ರಮಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಬಾರಿ ಪ್ರಿಯಾಂಕ ಗಾಂಧಿ ಅವರ ಮೂಲಕ ಕಾಂಗ್ರೆಸ್‌ ಶತಾಯಗತ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂ 

ಕೊರೊನಾ ಸಾಂಕ್ರಾಮಿಕದ ಅಸಮರ್ಪಕ ನಿರ್ವಹಣೆಗಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, “ಬಿಜೆಪಿ, ಎಸ್‌ಪಿ ಅಥವಾ ಬಿಎಸ್‌ಪಿ ಪಕ್ಷಗಳು ಹತ್ರಾಸ್, ಉನ್ನಾವೋ ಮತ್ತು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಯುಪಿ ಜನರಿಗೆ ಸಹಾಯ ಮಾಡಲು ಬಂದಿಲ್ಲ. ಆದರೆ ಕಾಂಗ್ರೆಸ್ ಈ ಎಲ್ಲಾ ಸಂದರ್ಭದಲ್ಲಿ  ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ಭಾರತ ಸ್ವಾತಂತ್ರ್ಯ ಹೊಂದಲು ಕಾರಣಕರ್ತರಾದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಅವರಂತಹವರನ್ನು ನಿರಂತರವಾಗಿ ಬಿಜೆಪಿ ಅವಮಾನಿಸುತ್ತಿದೆ. ಬಿಜೆಪಿಗೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಯಾವುದೆ ಗೌರವ ಇಲ್ಲ” ಎಂದು ಪ್ರಿಯಾಂಕ ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಬಲಪಡಿಸಲು, ಬೂತ್ ಮಟ್ಟದ ಚಟುವಟಿಕೆಗಳು ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಇದಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಹೆಚ್ಚು ಪೋಸ್ಟ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...