Homeಮುಖಪುಟಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

ಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಅಲ್ಲಿನ ಎಲ್ಲಾ ಪಕ್ಷಗಳು ಸಜ್ಜಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ಮತ್ತೆ ಅದೇ ಹಿಂದುತ್ವವನ್ನು ತನ್ನ ಚುನಾವಣಾ ಪ್ರಚಾರದ ಪ್ರಮುಖ ವಿಷಯವನ್ನಾಗಿಸಿದರೆ, ಹಲವು ವರ್ಷಗಳ ಕಾಲ ಅಧಿಕಾರದಿಂದ ವಂಚಿತವಾಗಿರುವ ಕಾಂಗ್ರೆಸ್ ಪಕ್ಷ ಪ್ರಿಯಾಂಕ ಗಾಂಧಿ ಅವರ ಮೂಲಕ ರಾಜ್ಯದಲ್ಲಿ ಮತ್ತೇ ಪುಟಿದೇಳಲು ಪ್ರಯತ್ನಿಸುತ್ತಿದೆ. ಹಲವು ಭರವಸೆಗಳನ್ನು ಕಾಂಗ್ರೆಸ್‌ ಜನರಿಗೆ ನೀಡುತ್ತಿದ್ದು, ಅದರಲ್ಲೂ ಮಹಿಳಾ ಮತದಾರರನ್ನು ಪಕ್ಷ ಗುರಿಯಾಗಿಸಿದೆ.

ಈ ಮಧ್ಯೆ ಮಾಜಿ ಆಡಳಿತ ಪಕ್ಷವಾಗಿರುವ ಸಮಾಜವಾದಿ ಪಕ್ಷವು ವಿಭಿನ್ನ ರೀತಿಯಲ್ಲಿ ಜನರನ್ನು ಸೆಳೆಯಲು ಹೊರಟಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ತಮ್ಮ ಪಕ್ಷದ ಹೆಸರಿನ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದ್ದಾರೆ. ಅವರು ಅದನ್ನು “ಸಮಾಜವಾದದ ಸುಗಂಧದ್ರವ್ಯ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ಸಮಾಜವಾದಿ ಪಕ್ಷದ ಎಂಎಲ್‌ಸಿ ಪಮ್ಮಿ ಜೈನ್ ಸಿದ್ಧಪಡಿಸಿದ ಸಮಾಜವಾದಿ ಸುಗಂಧವು 22 ನೈಸರ್ಗಿಕ ಪರಿಮಳಗಳಿಂದ ಮಾಡಲ್ಪಟ್ಟಿದೆ. ಇದರ ಸುಗಂಧವು ಇತರ ದ್ರವ್ಯಗಳಿಗಿಂತ ಹೆಚ್ಚು ಕಾಲ ಉಳಿಯುತ್ತದೆ ಎಂದು ಪಕ್ಷವು ಹೇಳಿದೆ.

ರಾಜಕೀಯ ಪಕ್ಷವೊಂದು ತನ್ನದೇ ಆದ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿರುವುದು ರಾಜಕೀಯ ಇತಿಹಾಸದಲ್ಲೇ ಇದೇ ಮೊದಲು ಎನ್ನಲಾಗಿದೆ.

ಸುವಾಸನೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್‌ ಯಾದವ್‌, “ಜನರು ಅದನ್ನು ಬಳಸಿದಾಗ, ಅವರು ಸಮಾಜವಾದದ ಸುವಾಸನೆಯನ್ನು ಅನುಭವಿಸುತ್ತಾರೆ” ಎಂದು ಹೇಳಿದ್ದಾರೆ.

ಈ ಸುಗಂಧ ದ್ರವ್ಯವು 2022 ರಲ್ಲಿ ರಾಜ್ಯದ  ದ್ವೇಷವನ್ನು ಹೊರಹಾಕುತ್ತದೆ ಎಂದು ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್ ಜೈನ್ ಬಿಡುಗಡೆ ಸಮಾರಂಭದಲ್ಲಿ ಹೇಳಿದ್ದಾರೆ.

ಸುಗಂಧ ದ್ರವ್ಯವನ್ನು ಸಮಾಜವಾದಿ ಪಕ್ಷದ ಬಣ್ಣವಾದ ಕೆಂಪು ಮತ್ತು ಹಸಿರು ಬಣ್ಣಗಳಲ್ಲಿ ಬಾಕ್ಸ್ ಮಾಡಲಾಗಿದೆ. ಬಣ್ಣದ ಗಾಜಿನ ಬಾಟಲಿಯಲ್ಲಿರುವ ದ್ರವ್ಯವೂ ಪಕ್ಷದ ಹೆಸರು ಮತ್ತು ಪಕ್ಷದ ಚಿಹ್ನೆಯಾದ ಸೈಕಲ್ ಅನ್ನು ಹೊಂದಿರುತ್ತದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈ ಶ್ರೀರಾಮ್‌ ಘೋಷಣೆ ಕೂಗದ ಬೀದಿ ವ್ಯಾಪಾರಿ ಮೇಲೆ ಹಲ್ಲೆ – ಮತೀಯ ಗೂಂಡಾಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...