Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....