Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....