HomeಮುಖಪುಟUP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

UP: ಪಾಕಿಸ್ತಾನಿ ಹಾಡು ಕೇಳಿದ ಇಬ್ಬರು ಮುಸ್ಲಿಂ ಬಾಲಕರ ಮೇಲೆ ಎಫ್‌ಐಆರ್‌

- Advertisement -
- Advertisement -

ನವದೆಹಲಿ: ಮೊಬೈಲ್ ಫೋನ್‌ನಲ್ಲಿ ಪಾಕಿಸ್ತಾನಿ ಹಾಡನ್ನು ಆಲಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬರೇಲಿಯಲ್ಲಿ ಇಬ್ಬರು ಅಪ್ರಾಪ್ತ ಮುಸ್ಲಿಂ ಬಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 13 ರಂದು ಜಿಲ್ಲೆಯ ಭೂತಾ ಪ್ರದೇಶದ ಸಿಂಘೈ ಮುರಾವನ್ ಗ್ರಾಮದ ಇಬ್ಬರು ಬಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 16 ಮತ್ತು 17ರ ಹರೆಯದ ಸೋದರ ಸಂಬಂಧಿಗಳು ಸಿಂಘೈ ಮುರಾವನ್‌ನಲ್ಲಿ ಕಿರಾಣಿ ಅಂಗಡಿಯನ್ನು ನಡೆಸುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನೆರೆಯ ದೇಶವನ್ನು ಹೊಗಳಿದ ಹಾಡನ್ನು ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿ ಆಶಿಶ್ ಎಂಬವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಕಿಸ್ತಾನಿ ಹಾಡನ್ನು ಪ್ಲೇ ಮಾಡಿದ್ದನ್ನು ವಿರೋಧಿಸಿದ ಆಶಿಶ್, ಬಾಲಕರೊಂದಿಗೆ ಜಗಳವಾಡಿದ್ದಾರೆ. ಘಟನೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಹಾಡು ಕೇಳುವುದನ್ನು ನಿಲ್ಲಿಸುವಂತೆ ಇಬ್ಬರಿಗೂ ಹೇಳಲಾಯಿತು. ಆದರೆ ನಿಂದನೆ ಮಾಡಿದ ಬಾಲಕರು ಭಾರತದ ಬಗ್ಗೆಯೂ ಕೆಟ್ಟದ್ದಾಗಿ ಮಾತನಾಡಿದರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 13 ರ ಬುಧವಾರ ಸಂಜೆ 5 ಗಂಟೆಗೆ ಇಬ್ಬರನ್ನು ಕರೆದುಕೊಂಡು ಹೋಗಲಾಯಿತು. ಇಡೀ ರಾತ್ರಿ ಠಾಣೆಯಲ್ಲಿ ಇರಿಸಿಕೊಳ್ಳಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ಥಳೀಯ ವರದಿಗಾರನಿಂದ ವಿಡಿಯೊ ಸಂಗ್ರಹಿಸಿದ ‘ದಿ ವೈರ್‌’ ವರದಿ ಮಾಡಿದ್ದು, “ಇವರಿಬ್ಬರ ಸೋದರಸಂಬಂಧಿ ಸದ್ದಾಂ ಹುಸೇನ್ ಪ್ರಕಾರ ಕಿರಿಯ ಸಹೋದರ ಕೇವಲ 40 ಸೆಕೆಂಡ್‌ ಹಾಡು ಹಾಕಿದ್ದಾನೆ. ಬೇಕಂತಲೇ ಪ್ಲೇ ಮಾಡಿಲ್ಲ. ನಂತರ ಕ್ಷಮೆಯಾಚಿಸಿದ್ದಾರೆ. ಆದರೆ ಕ್ಷಮೆಯನ್ನು ಒಪ್ಪಿಕೊಂಡಿಲ್ಲ.”

ಕಿರಿಯ ಹುಡುಗನ ಚಿಕ್ಕಮ್ಮ ಸಹನಾ ಅವರು ಕಿರಾಣಿ ಅಂಗಡಿಯಿಂದ ಕೆಲವು ನಿಮಿಷಗಳ ಕಾಲ ಹೊರಹೋಗಿದ್ದಾಗ ಘಟನೆ ನಡೆದಿದೆ. ಅರಿವಿಗೆ ಬಾರದೆ ಹಾಡು ಪ್ಲೇ ಮಾಡಿ ಬಂಧನಕ್ಕೊಳಗಾದುದನ್ನು ಕಂಡು ಸಹನಾ ಆತಂಕಿತರಾಗಿದ್ದಾರೆ. “ಈ ಬಾಲಕರು ವಿದ್ಯಾವಂತರಲ್ಲ. ಅವರ ಪರವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

ಪಾಕಿಸ್ತಾನಿ ಬಾಲ ಕಲಾವಿದೆ ಆಯತ್ ಆರಿಫ್ ಅವರ ‘ಪಾಕಿಸ್ತಾನ್ ಜಿಂದಾಬಾದ್’ ಹಾಡನ್ನು ಈ ಹುಡುಗರು ಕೇಳುತ್ತಿದ್ದರು ಎನ್ನಲಾಗಿದೆ.

ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ), ರಾಜ್‌ಕುಮಾರ್ ಅಗರ್ವಾಲ್ ಪ್ರತಿಕ್ರಿಯೆ ನೀಡಿದ್ದು, ದೂರಿನ ಮೇರಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಬರೇಲಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಅವರು ಟೈಮ್ಸ್‌ ಆಫ್‌ ಇಂಡಿಯಾ ಜೊತೆ ಮಾತನಾಡಿ, “ಯುವಕರನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ನನಗೆ ತಿಳಿಸಿದ್ದರಿಂದ ರಾತ್ರಿಯಿಡೀ ಪೊಲೀಸರು ಅವರನ್ನು ಬಂಧಿಸಿದ್ದಾರೆಯೇ ಎಂದು ನನಗೆ ತಿಳಿದಿಲ್ಲ. ರೆಕಾರ್ಡ್ ಮಾಡಿದ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸದ ಕಾರಣ ಅಂತಹ ಸಂದರ್ಭಗಳಲ್ಲಿ ನೋಟಿಸ್‌ಗಳನ್ನು ಸಲ್ಲಿಸಲು ಅವಕಾಶವಿದೆ. ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ವರದಿಯನ್ನು ನೀಡಲು ನಾನು ಹಿರಿಯ ಪೊಲೀಸರಲ್ಲಿ ಕೇಳುತ್ತೇನೆ” ಎಂದಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153B, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...