Homeಮುಖಪುಟಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

- Advertisement -
- Advertisement -

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯಲ್ಲಿ ಅತ್ಯಾಚಾರ ಎಸಗಿದ್ದ ಆರೋಪಿಗಳಿಂದ 50,000 ರೂ ಪಡೆದು, ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಸಂತ್ರಸ್ತೆಗೆ ಒತ್ತಾಯಿಸಿರುವ ವಿಲಕ್ಷಣ ಘಟನೆ ನಡೆದಿದೆ. ಜಿಲ್ಲೆಯ ಕೋತಿಭರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಕುಟುಂಬವು ಪಂಚಾಯತ್‌ನ ನಿರ್ಧಾರವನ್ನು ನಿರಾಕರಿಸಿದ್ದು, ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚಾಯತ್‌ನ ವಿವಾದಾತ್ಮಕ ನಿರ್ಧಾರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ಬಳಿಕ, ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ಮಹಾರಾಜ್‌ಗಂಜ್‌ನ ಎಸ್‌ಪಿ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

ಜೂನ್‌ 23ರಂದು ಕೋತಿಭರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರದೇಶದ ನಿವಾಸಿಯಾದ ಬಾಲಕಿಯ ಮೇಲೆ ಅದೇ ಗ್ರಾಮದ ಯುವಕರು ಅತ್ಯಾಚಾರ ಎಸಗಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಪಂಚಾಯತಿಗೆ ದೂರು ನೀಡಿದ್ದರು. ಆರೋಪಿಗಳಿಂದ 50,000 ರೂ.ಗಳನ್ನು ತೆಗೆದುಕೊಂಡು, ಅವರ ಕಪಾಳಕ್ಕೆ ಬೂಟಿನಿಂದ ಐದು ಬಾರಿ ಹೊಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪಂಚಾಯತ್ ಸದಸ್ಯರು ಸೂಚನೆ ನೀಡಿದ್ದರು.

ಆದರೆ, ಬಾಲಕಿಯ ಕುಟುಂಬ ಈ ನಿರ್ಧಾರವನ್ನು ನಿರಾಕರಿಸಿ, ಜೂನ್ 24 ರಂದು ಕೋತಿಭಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತ್ತು. ಕುಟುಂಬದ ದೂರಿನ ಮೇರೆಗೆ, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಪೋಕ್ಸೊ ಕಾಯ್ದೆಯ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಂತರ ಕುಟುಂಬವು ಪಂಚಾಯತ್ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದು, ಇದರ ಬೆನ್ನಲ್ಲೇ ಮಹಾರಾಜ್ ಗಂಜ್ ಎಸ್ಪಿ ಪ್ರದೀಪ್ ಗುಪ್ತಾ ಮಂಗಳವಾರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿದೆ ಎಂದು ವರದಿಯಾದರೆ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಮತ್ತು ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರದೀಪ್‌ ಗುಪ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...