Homeಮುಖಪುಟನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಬಗೆಗಿನ ಕಾಂಗ್ರೆಸ್ ಇತಿಹಾಸಕ್ಕೆ ಸಂಬಂಧಿಸಿದ ಭಾಗಗಳನ್ನು 12 ನೇ ತರಗತಿಯ ಪಠ್ಯಕ್ರಮದಿಂದ ಉತ್ತರ ಪ್ರದೇಶದ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಈ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ವಿರೋಧಿಸಿದ್ದು, ಪಠ್ಯಕ್ರಮ ಕೈಬಿಡುವ ಕ್ರಮದಿಂದ ಹಿಂದಕ್ಕೆ ಸರಿಯದಿದ್ದರೆ ರಾಜ್ಯಾದ್ಯಮತ ಆಂದೋಲನಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಕಾಂಗ್ರೆಸ್ ಮುಖಂಡ ಅನಿಲ್ ಶಾಸ್ತ್ರಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರಿಗೆ ಭಾನುವಾರ ಸಂಜೆ ಪತ್ರ ಬರೆದಿದ್ದು, ಆ ಭಾಗಗಳನ್ನು ಪಠ್ಯಕ್ರಮದಲ್ಲಿ ಪುನಃ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನು “ಪಿತೂರಿ” ಎಂದು ಕರೆದ ಅನಿಲ್ ಶಾಸ್ತ್ರಿ, ’ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಸ್ವಾತಂತ್ರ್ಯದ ನಂತರ ದೇಶದ ರಚನೆಯಲ್ಲಿ ಕಾಂಗ್ರೆಸ್ ಕೊಡುಗೆಯನ್ನು ತೊಡೆದುಹಾಕಲು ಬಯಸುತ್ತಿವೆ’ ಎಂದು ಕಿಡಿಕಾರಿದ್ದಾರೆ.

ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಲಲ್ಲು, ಅನಿಲ್ ಶಾಸ್ತ್ರಿ ಬರೆದ ಪತ್ರವನ್ನು ಅರಿತುಕೊಂಡು ಕ್ರಮ ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾದರೆ, ಅವರು ಈ ವಿಷಯದ ವಿರುದ್ಧ ಆಂದೋಲನ ನಡೆಸುತ್ತೇವೆ ಎಂದಿದ್ದಾರೆ.

“ದೇಶದ ಮಕ್ಕಳು ನೆಹರೂ-ಶಾಸ್ತ್ರಿಗಳ (ಪರಂಪರೆಯ) ಬಗ್ಗೆ ತಿಳಿದುಕೊಳ್ಳದಿದ್ದರೆ, ಇತಿಹಾಸದ ಬಗ್ಗೆ ಏನು ಕಲಿಯುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ. “ಇದೆಲ್ಲವೂ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿದೆ. ಯುಪಿ ಕಾಂಗ್ರೆಸ್ ಇದನ್ನು ಬಹಿರಂಗವಾಗಿ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆ ನಡೆಯುವ ಅವಧಿ ಕಡಿತಗೊಂಡಿದ್ದರಿಂದ 9-12 ತರಗತಿಗಳಿಂದ ಪಠ್ಯಕ್ರಮದ ತರ್ಕಬದ್ಧಗೊಳಿಸುವಿಕೆಯ ಭಾಗವಾಗಿ ಕೆಲ ಪಠ್ಯಕ್ರಮಗಳನ್ನು ಕೈಬಿಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ಕಾಂಗ್ರೆಸ್, ನೆಹರೂ ಮತ್ತು ಶಾಸ್ತ್ರಿಗೆ ಸಂಬಂಧಿಸಿದ ಭಾಗಗಳು ಯುನಿಟ್ ಬಿ ಎಂಬ ವಿಭಾಗದ ಅಡಿಯಲ್ಲಿ 12 ನೇ ತರಗತಿಯ ಪಠ್ಯಕ್ರಮದ ಒಂದು ಭಾಗವಾಗಿದ್ದವು. ಇದು ‘ಸ್ವತಂತ್ರ ಭಾರತದಲ್ಲಿ ರಾಜಕೀಯ’ ಎಂಬ ಪಠ್ಯದ ಭಾಗವಾಗಿತ್ತು.

’’ಏಕ ಪಕ್ಷ (ಕಾಂಗ್ರೆಸ್) ಪ್ರಾಬಲ್ಯದ ಹಂತ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳು, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರಾಬಲ್ಯದ ಸ್ವರೂಪ, ಕಾಂಗ್ರೆಸ್ ಕಾರ್ಯವೈಖರಿಗೆ ಸವಾಲುಗಳು, ನೆಹರೂ ಮತ್ತು ಶಾಸ್ತ್ರಿ ನಂತರದ ಸಾಮಾನ್ಯ ಮಾದರಿಗಳು, 1967 ರ ಚುನಾವಣೆ, ಕಾಂಗ್ರೆಸ್ ವಿಭಜನೆ ಮತ್ತು ಮರು ಸಂಘಟನೆ ಮತ್ತು 1971ರ ಚುನಾವಣೆಯಲ್ಲಿ ಪಕ್ಷದ ಗೆಲುವು’’ ಮುಂತಾದವುಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಇವುಗಳನ್ನಷ್ಟೇ ಅಲ್ಲದೇ ಇನ್ನೂ ಇತರೆ ವಿಷಯಗಳನ್ನು ಕೈಬಿಡಲಾಗಿದೆ. ವಿಲಿಯಂ ಷೇಕ್ಸ್‌ಪಿಯರ್‌ನ ಭವ್ಯ ಕೃತಿ ‘ಮರ್ಚೆಂಟ್ ಆಫ್ ವೆನಿಸ್’ ಅನ್ನು 12 ನೇ ತರಗತಿಯ ಇಂಗ್ಲಿಷ್ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಜನಪ್ರಿಯ ವಿಡಂಬನಕಾರ ಹರಿಶಂಕರ್ ಪಾರ್ಸಾಯಿ ಬರೆದ ‘ನಿಂಡಾ ರಾಸ್’ ಎಂಬ ವಿಡಂಬನೆಯನ್ನು 12 ನೇ ತರಗತಿ ಹಿಂದಿ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಚುನಾವಣಾ ರಾಜಕೀಯ, ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗೆ ಸಂಬಂಧಿಸಿದ ಭಾಗಗಳನ್ನು ಸಮಾಜ ವಿಜ್ಞಾನದ 10 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದ್ದು, ಚುನಾವಣಾ ರಾಜಕೀಯ ಮತ್ತು ಚುನಾವಣಾ ಸುಧಾರಣೆಗಳನ್ನು 11 ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ನಾಜಿಸಂನ ಉದಯ’, ಹಿಟ್ಲರ್ ಮತ್ತು ಹರಪ್ಪನ್ ನಾಗರಿಕತೆಯ ವಿಷಯಗಳನ್ನು 12 ನೇ ತರಗತಿಯ ಇತಿಹಾಸ ಪಠ್ಯಕ್ರಮದಿಂದ ಕೈಬಿಡಲಾಗಿದೆ.

ಕಳೆದ ವಾರ ಮಂಡಳಿಯ ಕಾರ್ಯದರ್ಶಿ ದಿವ್ಯಾ ಕಾಂತ್ ಶುಕ್ಲಾ ಮಾಧ್ಯಮಗಳೊಂದಿಗೆ ನಡೆದ ಸಂವಹನದಲ್ಲಿ, ಈ ಎಲ್ಲ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆಯೆ ಹೊರತು ಪಠ್ಯಪುಸ್ತಕಗಳಿಂದಲ್ಲ. “ಅವುಗಳನ್ನು ಓದಲು ಬಯಸುವವರಿಗೆ ಅವು ತುಂಬಾ ಲಭ್ಯವಿದೆ” ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ಕಡಿಮೆ ತರಗತಿಗಳು ನಡೆದವು, ಅದಕ್ಕಾಗಿಯೇ ಅವರ ಪರೀಕ್ಷೆಗಳ ಪಠ್ಯಕ್ರಮವನ್ನು ಕಡಿಮೆ ಮಾಡಲಾಗಿದೆ ಎಂದು ಶುಕ್ಲಾ ಹೇಳಿದರು.

ಈ ವಿಷಯದಲ್ಲಿ ಎದ್ದಿರುವ ಆಕ್ಷೇಪಣೆಗಳ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಸರ್ಕಾರದ ನಿಜವಾದ ಉದ್ದೇಶವು ಸ್ಪಷ್ಟವಾಗಿದೆ, ಇಲ್ಲದಿದ್ದರೆ ಅಂತಹ ಪ್ರಮುಖ ಅಧ್ಯಾಯಗಳನ್ನು ಹೇಗೆ ಬಿಡಬಹುದು? ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳದಿದ್ದರೆ, ಅವರು ದೇಶದ ಚುನಾವಣಾ ಇತಿಹಾಸವನ್ನು ಹೇಗೆ ಗ್ರಹಿಸಲು ಸಾಧ್ಯವಾಗುತ್ತದೆ” ಎಂದು ಅನಿಲ್ ಶಾಸ್ತ್ರಿ ಪ್ರಶ್ನಿಸಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿಯೂ ಕೂಡ ಟಿಪ್ಪು ಸುಲ್ತಾನ್ ಬಗೆಗಿನ ಪಠ್ಯಗಳನ್ನು ಕೈಬಿಟ್ಟಿರುವುದಾಗಿ ವರದಿಯಾಗಿದೆ.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...