Homeಮುಖಪುಟಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಾರೆ

- Advertisement -
- Advertisement -

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದೆ.

ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರು ಶ್ರೀಯಶ್ ಲಲಿತ್ ಅವರ ಸೇರ್ಪಡೆಗೆ ಅನುಮೋದನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನು ಮುಂದೆ ಶ್ರೀಯಶ್‌ ಅವರು ಹಿರಿಯ ನ್ಯಾಯವಾದಿಯಾಗಿ ಉತ್ತರ ಪ್ರದೇಶ ಸರ್ಕಾರ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ನಲ್ಲಿ ವಾದಿಸಲಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು

ಉತ್ತರಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೊರಡಿಸಿದ ಪ್ರಕಟಣೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ಶ್ರೀಯಶ್ ಯು ಲಲಿತ್ ಅವರನ್ನು ಸೇರ್ಪಡೆಗೊಳಿಸಲು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾರರ ಹೆಸರು ಕೈಬಿಟ್ಟ ಹಗರಣ; ಬಿಜೆಪಿ ಪಕ್ಷದ ಕೈವಾಡದ ಆರೋಪ

0
ಭಾರತದ ಪ್ರಜಾಪ್ರಭುತ್ವದಲ್ಲಿ ಗ್ರಾಮ ಪಂಚಾಯ್ತಿಯಿಂದ ಹಿಡಿದು ಸಂಸತ್‌ವರೆಗೆ ಹಲವು ಹಂತಗಳ ಚುನಾವಣೆಗಳಲ್ಲಿ ಮತ ಚಲಾಯಿಸುವ ಮೂಲಕ ಜನಪ್ರತಿನಿಧಿಗಳನ್ನು ಮತದಾರರು ಆರಿಸುವುದಲ್ಲದೆ, ಆಳುವ ಸರ್ಕಾರಗಳನ್ನು ನಿರ್ಧರಿಸುತ್ತಾರೆ. ಈ ಚುನಾವಣಾ ವ್ಯವಸ್ಥೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕಾದದ್ದು...