Homeಚಳವಳಿಡಾ. ಕಫೀಲ್ ಖಾನ್ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ UP ಸರ್ಕಾರ!

ಡಾ. ಕಫೀಲ್ ಖಾನ್ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ UP ಸರ್ಕಾರ!

ಡಾ.ಕಫೀಲ್‌ ಖಾನ್ ಅವರ ಬಂಧನವನ್ನು ಕಾನೂನುಬಾಹಿರ ಎಂದು ಕರೆದಿದ್ದ ಅಲಹಾಬಾದ್ ಹೈಕೋರ್ಟ್, ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಆದೇಶಿಸಿತ್ತು.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನವಾಗಿದ್ದ ಡಾ. ಕಫೀಲ್ ಖಾನ್‌ರವರನ್ನು ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮುಂಬೈನಲ್ಲಿ ಬಂಧಿಸಲಾಗಿತ್ತು. ಆದರೆ ಈ ಪ್ರಕರಣದ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ‘ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು’ ಎಂದು ಹೇಳಿ ಅವರಿಗೆ ಈ ವರ್ಷದ ಸೆಪ್ಟಂಬರ್ ಆರಂಭದಲ್ಲಿ ಜಾಮೀನು ನೀಡಿತ್ತು.

ಡಾ.ಕಫೀಲ್‌ ಖಾನ್ ಅವರ ಬಂಧನವನ್ನು ಕಾನೂನುಬಾಹಿರ ಎಂದು ಕರೆದಿದ್ದ ಅಲಹಾಬಾದ್ ಹೈಕೋರ್ಟ್, ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಆದೇಶಿಸಿತ್ತು. ಬಿಡುಗಡೆಯ ನಂತರ ‘ನನ್ನ ವೈದ್ಯ ಹುದ್ದೆಯನ್ನು ಮರಳಿಕೊಡಿ, ದೇಶಸೇವೆಗೆ ಸಿದ್ಧನಿದ್ದೇನೆ’ ಎಂದು ಕಫೀಲ್ ಖಾನ್ ಘೋಷಿಸಿದ್ದರು.

ಆದರೆ ಯುಪಿ ಸರ್ಕಾರವು ಡಾ. ಕಫೀಲ್ ಖಾನ್ ಮೇಲೆ ಶಿಸ್ತು ಕ್ರಮ, ಸೇವೆಯಿಂದ ಅಮಾನತು, ಪೊಲೀಸ್ ಪ್ರಕರಣಗಳ ನೋಂದಣಿ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಅಪರಾಧಗಳ ಇತಿಹಾಸವನ್ನು ಹೊಂದಿದ್ದಾರೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆದರೆ ಬಿಆರ್‌ಡಿ ಕಾಲೇಜಿನ ಪ್ರಕರಣ ಸೇರಿದಂತೆ ಕಫೀಲ್‌ ಖಾನ್‌ ಮೇಲಿನ ಹಲವು ಪ್ರಕರಣಗಳನ್ನು ಸಾಕ್ಷಿಗಳಿಲ್ಲದೆ ಕೈಬಿಡಲಾಗಿದೆ. ಆದರೂ ಸರ್ಕಾರ ಅವರ ಮೇಲೆ ಹಗೆತನ ಸಾಧಿಸುತ್ತಿದ್ದು ಅವರನ್ನು ಬಂಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆ ಆಕ್ಸಿಜನ್ ಕೊರತೆ ದುರಂತ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣವನ್ನು ಕೈಬಿಟ್ಟಿತ್ತು.


ಇದನ್ನೂ ಓದಿ: ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...