Homeಮುಖಪುಟಯುಪಿ: ಗೋರಖನಾಥ ದೇವಾಲಯದ ಹೊರಗೆ ಪೊಲೀಸರ ಮೇಲೆ ದಾಳಿ ಮಾಡಿದ ಐಐಟಿ ಪದವೀಧರ!

ಯುಪಿ: ಗೋರಖನಾಥ ದೇವಾಲಯದ ಹೊರಗೆ ಪೊಲೀಸರ ಮೇಲೆ ದಾಳಿ ಮಾಡಿದ ಐಐಟಿ ಪದವೀಧರ!

- Advertisement -
- Advertisement -

ಐಐಟಿ ಪದವೀಧರ ಇಂಜಿನಿಯರೊಬ್ಬ ಉತ್ತರ ಪ್ರದೇಶದ ಗೋರಖ್‌ಪುರದ ಗೋರಖ್‌ನಾಥ್ ದೇವಸ್ಥಾನದ ಹೊರಗೆ ಇಬ್ಬರು ಪೊಲೀಸರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಭಾನುವಾರ ಸಂಜೆ ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ಆರೋಪಿಯು ದೇವಸ್ಥಾನಕ್ಕೆ ನುಗ್ಗಲು ಪ್ರಯತ್ನಿಸಿದ್ದನು.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಇಂಜಿನಿಯರ್ ಕಠಾರಿಯನ್ನು ಎತ್ತಿ ಹಿಡಿದು ಬೀಸುತ್ತಿರುವುದನ್ನು ಕಂಡು ಬಂದಿದೆ. ವಿಶೇಷವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನ ಅರ್ಚಕರಾಗಿರುವ ಗೋರಖನಾಥ ಮಠದ ಪ್ರಧಾನ ಕಛೇರಿಯಾದ ಗೋರಖನಾಥ ದೇವಾಲಯದ ಹೊರಗೆ ವ್ಯಕ್ತಿಯು ಗಲಾಟೆ ಮಾಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಪೊಲೀಸರು ವ್ಯಕ್ತಿಯನ್ನು ಅಹ್ಮದ್ ಮುರ್ತಾಜಾ ಅಬ್ಬಾಸಿ ಎಂದು ಗುರುತಿಸಿದ್ದು, ವಿಡಿಯೊದಲ್ಲಿ ವ್ಯಕ್ತಿಯ ಮೇಲೆ ಗುಂಪೊಂದು ಕಲ್ಲುಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ. ಭಾನುವಾರ ಸಂಜೆ 7 ಗಂಟೆಗೆ ದೇವಸ್ಥಾನದ ದ್ವಾರದ ಹೊರಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಮುರ್ತಾಜಾ ಗೋರಖ್‌ಪುರದ ನಿವಾಸಿಯಾಗಿದ್ದು, ಪ್ರತಿಷ್ಠಿತ ಐಐಟಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ)-ಬಾಂಬೆಯಲ್ಲಿ ಓದಿದ್ದು, 2015 ರಲ್ಲಿ ಪದವಿ ಪಡೆದಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

“ಆರೋಪಿಯಿಂದ ಲ್ಯಾಪ್‌ಟಾಪ್ ಮತ್ತು ಫೋನ್ ವಶಪಡಿಸಿಕೊಳ್ಳಲಾಗಿದ್ದು, ಟಿಕೆಟ್ ಸಹ ಪತ್ತೆಯಾಗಿದೆ. ತನಿಖೆ ನಡೆಯುತ್ತಿದೆ. ನಾವು ಏನನ್ನೂ ತಳ್ಳಿಹಾಕಲು ಸಾಧ್ಯವಿಲ್ಲ. ಭಯೋತ್ಪಾದನೆಯ ಕೋನವಿದ್ದರೂ ಇರಬಹುದು. ಪ್ರಕರಣವನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರ್ಗಾಯಿಸಲಾಗುವುದು” ಎಂದು ಗೋರಖ್‌ಪುರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಖಿಲ್ ಕುಮಾರ್ ಹೇಳಿದ್ದಾರೆ.

ಯುಪಿ ಮುಖ್ಯಮಂತ್ರಿಯಿಂದಾಗಿ ಗೋರಖನಾಥ ಯುಪಿಯ ಅತ್ಯಂತ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾಗಿದೆ. ಆದಿತ್ಯನಾಥ್ ಅವರು ಗೋರಖ್‌ಪುರವನ್ನು ಹಲವು ಬಾರಿ ಸಂಸತ್ತಿನಲ್ಲಿ ಪ್ರತಿನಿಧಿಸಿದ್ದಾರೆ. ಇತ್ತೀಚೆಗೆ ಇದುವೆ ಮೊದಲ ಬಾರಿಗೆ ಗೋರಖ್‌ಪುರ ನಗರ ಕ್ಷೇತ್ರದಿಂದ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.

“ಆರೋಪಿಯು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ಗೋರಖನಾಥ ದೇವಾಲಯಕ್ಕೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದನು. ಆದರೆ ಪೊಲೀಸರು ಅವರನ್ನು ತಡೆದರು” ಎಂದು ಗೋರಖ್‌ಪುರದ ಹಿರಿಯ ಪೊಲೀಸ್ ಅಧಿಕಾರಿ ವಿಪಿನ್ ತಾಡಾ ಹೇಳಿದ್ದಾರೆ. ಮುರ್ತಾಜಾ ಮತ್ತು ಆತ ದಾಳಿ ಮಾಡಿದ ಇಬ್ಬರು ಪೊಲೀಸರು ಆಸ್ಪತ್ರೆಯಲ್ಲಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...