Homeಮುಖಪುಟಯುಪಿ | ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಪೊಲೀಸರು ಅಮಾನತು

ಯುಪಿ | ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಪೊಲೀಸರು ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಗೊಂಡಾದ ಮನೆಯೊಂದರಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಯುಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆ ಬಗ್ಗೆ ತರಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಗದ್‌ಗಂಜ್ ಗ್ರಾಮದ ಮೊಹಮ್ಮದ್ ಫಾರೂಕ್ ಎಂಬುವವರ ಮನೆಯಲ್ಲಿ ಸೋಮವಾರ ಕೆಲವರು ಪಟಾಕಿ ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿತ್ತು.

ಸಬ್ ಇನ್ಸ್‌ಪೆಕ್ಟರ್ ಸುಭಾಷ್ ವಿಶ್ವಕರ್ಮ ಅವರ ದೂರಿನ ಆಧಾರದ ಮೇಲೆ ತರಬ್‌ಗಂಜ್ ಪೊಲೀಸ್ ಠಾಣೆಯಲ್ಲಿ ಇಶಾಕ್, ಅಯೂಬ್ ಅಲಿಯಾಸ್ ಲಲ್ಲು, ಆಕಾಶ್ ಅಲಿಯಾಸ್ ಛೋಟು, ಕೃಷ್ಣ ಕುಮಾರ್, ಅಯಾಜ್ ಅಲಿಯಾಸ್ ತೂಫಾ, ಆಜಾದ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ಫೋಟಕ ವಸ್ತುಗಳ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಯುಪಿ

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಇವರೆಲ್ಲರೂ ಮನೆಯ ಮುಖ್ಯ ಗೇಟ್‌ಗೆ ಬೀಗ ಹಾಕಿ ಅಕ್ರಮವಾಗಿ ಪಟಾಕಿ ತಯಾರಿಕೆ ಮಾಡುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕಗಳ ತಡೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳಲ್ಲಿ ಒಬ್ಬರು ಅಯಾಜ್ ಮೊಹಮ್ಮದ್ ಅಲಿಯಾಸ್ ತೂಫಾನ್ (17) ಎಂದು ಗುರುತಿಸಲಾಗಿದ್ದು, ಸೋಮವಾರ ತಡರಾತ್ರಿ ಲಕ್ನೋದಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಘಟನೆಯಲ್ಲಿ ಮೂರಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ. ಇದಕ್ಕಿಂತಲೂ ಮುಂಚೆ ಆಕಾಶ್ (15) ಮತ್ತು ಲಲ್ಲು (30) ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು.

ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ರಗದ್‌ಗಂಜ್ ಪೊಲೀಸ್ ಹೊರಠಾಣೆ ಉಸ್ತುವಾರಿ ಸುನಿಲ್ ತಿವಾರಿ ಮತ್ತು ಬೀಟ್ ಕಾನ್‌ಸ್ಟೆಬಲ್‌ಗಳಾದ ಗೌರವ್ ಮಿಶ್ರಾ ಮತ್ತು ಕೃಷ್ಣ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...