Homeಕರೋನಾ ತಲ್ಲಣಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

- Advertisement -
- Advertisement -

ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ಹಳ್ಳಿಯೊಂದರಲ್ಲಿ ಕೊರೊನಾ ಪಾಸಿಟಿವ್‌‌ ರೋಗಿಗಳ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳಲ್ಲಿ “ಸುಳ್ಳು ಮಾಹಿತಿ” ಹರಡಿದ್ದಾರೆಂದು ಆರೋಪಿಸಿ ಯುಪಿ ಪೊಲೀಸರು ಗ್ರಾಮಸ್ಥನೊಬ್ಬನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ.

ಮೇವ್ಲಾ ಗೋಪಾಲಗಡ್‌‌ ಗ್ರಾಮದ ಮಾಜಿ ಗ್ರಾಮ ಪ್ರಧಾನ್ ಅವರ ಪತಿ ಯೋಗೇಶ್ ತಲನ್ ವಿರುದ್ಧ ಐಪಿಸಿ ಮತ್ತು ಸಾಂಕ್ರಾಮಿಕ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. “ಜೇವರ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ದೂರು ನೀಡಿದ್ದಾರೆ. ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಜೆವರ್ ಪೊಲೀಸ್ ಠಾಣೆಯ ಅಧಿಕಾರಿ ಉಮೇಶ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ವೃದ್ಧರೊಬ್ಬರಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಆದರೆ ಅವರು ಸ್ಥಳೀಯವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಸ್ಥಿತಿ ಹದಗೆಡಲು ಶುರುವಾಗುತ್ತಿದ್ದಂತೆ ಅವರನ್ನು ಜೇವರ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿದಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಅವರನ್ನು ಗೊತ್ತುಪಡಿಸಿದ ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲು ಸಲಹೆ ನೀಡಿದ್ದರು. ಆದರೆ ರೋಗಿಯು ತಾನು ಖಾಸಗಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿದ್ದರು. ಇಷ್ಟಾಗಿಯು ಅವರು ಆಸ್ಪತ್ರೆಗೆ ದಾಖಲಾಗದೆ ಸ್ಥಳೀಯವಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪ್ರಾಥಮಿಕ ಆರೋಗ್ಯಾಧಿಕಾರಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ, ಕೆಲವು ದಿನಗಳ ನಂತರ ರೋಗಿಯ ಉಸಿರಾಟಕ್ಕೆ ತೊಂದರೆ ಉಂಟಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರವು ಅವರಿಗೆ ಆಮ್ಲಜನಕವನ್ನು ನೀಡಿತ್ತು. “ಏತನ್ಮಧ್ಯೆ, ಆರೋಪಿಯು ಪತ್ರಕರ್ತರನ್ನು ಕರೆದಿದ್ದು, ಗ್ರೇಟರ್ ನೋಯ್ಡಾದಲ್ಲಿ ಸರ್ಕಾರಿ ವೈದ್ಯರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ” ಎಂದು ಜೀವರ್‌‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

0
ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಮಲದ ಚಿಹ್ನೆಯೊಂದಿಗೆ ತಲಾ...