Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...