Homeಮುಖಪುಟಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಕಾಸ್‌ಗಂಜ್ ಲಾಕಪ್‌ ಡೆತ್: 2ನೇ ಮರಣೋತ್ತರ ಪರೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಆದೇಶ

- Advertisement -
- Advertisement -

ಕಳೆದ ನವೆಂಬರ್ 9 ರಂದು ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 22 ವರ್ಷದ ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಲು ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (AIIMS) ಎರಡನೇ ಮರಣೋತ್ತರ ಪರೀಕ್ಷೆಗೆ ಕಳುಹಿಸುವಂತೆ ಅಲಹಾಬಾದ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಗುರುವಾರ ನ್ಯಾಯಮೂರ್ತಿಗಳಾದ ಅಂಜನಿ ಕುಮಾರ್ ಮಿಶ್ರಾ ಮತ್ತು ದೀಪಕ್ ವರ್ಮಾ ಅವರ ಪೀಠ ನೀಡಿದ ಆದೇಶದಲ್ಲಿ ಎರಡನೇ ಮರಣೋತ್ತರ ಪರೀಕ್ಷೆಯನ್ನು ಎಐಐಎಂಎಸ್ ನಿರ್ದೇಶಕರು ರಚಿಸಿದ ವೈದ್ಯರ ತಂಡ ನಡೆಸುತ್ತದೆ ಎಂದು ತಿಳಿಸಿದೆ.

ಯುವಕ ಅಲ್ತಾಫ್‌ನ ವಿರುದ್ಧ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. 22 ವರ್ಷದ ಯುವಕ ಮಂಗಳವಾರ (ನ. 9) ರಂದು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಯುವಕ ಶೌಚಾಲಯದ ಎರಡು ಅಡಿ ಎತ್ತರದ ಪೈಲಿನ ನಲ್ಲಿಗೆ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಪೊಲೀಸರು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯೇ ಆತನನ್ನು ಕೊಂದಿದ್ದಾರೆ ಎಂದು ಮೃತನ ಕುಟುಂಬ ಆರೋಪಿಸಿತ್ತು.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

“ಮೃತ ಅಲ್ತಾಫ್ ಅವರ ಮೃತದೇಹವನ್ನು ಕಾಸ್‌ಗಂಜ್ ಹಿರಿಯ ಪೊಲೀಸ್ ಅಧೀಕ್ಷಕರು ಅಥವಾ ಪೊಲೀಸ್ ಅಧೀಕ್ಷಕರ ಸಮ್ಮುಖದಲ್ಲಿ ತಕ್ಷಣವೇ ಹೊರತೆಗೆಯಬೇಕು ಎಂದು ನಾವು ಆದೇಶಿಸಿದ್ದೇವೆ. ಹೊರತೆಗೆದ ನಂತರ ಮೃತದೇಹವನ್ನು ಮೊಹರು ಮಾಡಲಾಗುವುದು. ಜೊತೆಗೆ ತಕ್ಷಣವೇ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ ಸಾಗಿಸಲಾಗುತ್ತದೆ, ಅಲ್ಲಿ ನಿರ್ದೇಶಕರು ರಚಿಸುವ ವೈದ್ಯರ ತಂಡದ ಸಮ್ಮುಖದಲ್ಲಿ ಹೊರತೆಗೆದ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು” ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

ಅರ್ಜಿದಾರರ ಪರ ವಕೀಲರಾದ ಅಲಿ ಕಂಬರ್ ಜೈದಿ ಮತ್ತು ಮೊಹಮ್ಮದ್ ಡ್ಯಾನಿಶ್, ಅಲ್ತಾಫ್ ಅವರ ಮೃತದೇಹವನ್ನು ಹೊರತೆಗೆಯಬೇಕು ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ನವದೆಹಲಿಯ ಏಮ್ಸ್‌ನಲ್ಲಿ ನಡೆಸಬೇಕು ಎಂದು ಕೋರಿದ್ದರು. ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನೀಶ್ ಗೋಯೆಲ್ ಅವರು ಈ ಮನವಿಗೆ ವಿರೋಧಿಸಲಿಲ್ಲ.

“ಪರೀಕ್ಷೆಯ ವಿವಿಧ ಹಂತಗಳನ್ನು ಹೆಚ್ಚಿನ ರೆಸಲ್ಯೂಶನ್‌ನ ಸ್ಟಿಲ್ ಛಾಯಾಚಿತ್ರಗಳನ್ನು ಸಹ ತೆಗೆದುಕೊಂಡು ಸಂರಕ್ಷಿಸಬೇಕು. ಮರಣೋತ್ತರ ಪರೀಕ್ಷೆಯ ವರದಿ, ವಿಡಿಯೊ ದೃಶ್ಯಾವಳಿ ಮತ್ತು ಛಾಯಾಚಿತ್ರವನ್ನು ಮೂರು ಪ್ರತಿಗಳಲ್ಲಿ ಸಿದ್ಧಪಡಿಸಬೇಕು. ಆದೇಶವನ್ನು ಅಂಗೀಕರಿಸಿದ 10 ದಿನಗಳ ಅವಧಿಯಲ್ಲಿ ಇದೆಲ್ಲಾ ಪೂರ್ಣಗೊಳಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ.

ದೇಶದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದ್ದ ಕಾಸ್‌ಗಂಜ್ ಲಾಕಪ್ ಡೆತ್ ಪ್ರಕರಣದ ಕುರಿತು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಂದ ವರದಿ ಕೇಳಿತ್ತು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಹಲವು ಒತ್ತಡಗಳ ಬಳಿಕ ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...