Homeಮುಖಪುಟಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

ಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

- Advertisement -
- Advertisement -

ಕಳೆದ ವಾರ ಉತ್ತರ ಪ್ರದೇಶದ ಮಥುರಾ ರೈಲ್ವೇ ನಿಲ್ದಾಣದಲ್ಲಿ ನಿದ್ದೆ ಮಾಡುತ್ತಿದ್ದ ತಂದೆ-ತಾಯಿಯ ಪಕ್ಕದಿಂದ ಕಳವು ಮಾಡಲಾದ ಏಳು ತಿಂಗಳ ಮಗು ಅಲ್ಲಿಂದ 100 ಕಿ.ಮೀ ದೂರದ ಫಿರೋಜಾಬಾದ್‌ನ ಬಿಜೆಪಿ ಕಾರ್ಪೊರೇಟರ್‌ನ ಮನೆಯಿಂದ ಪತ್ತೆಯಾಗಿದೆ. ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಭೇದಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಕಾರ್ಪೋರೇಟರ್‌‌ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಬೇಕೆಂದು ಮಕ್ಕಳ ಕಳ್ಳತನ ಮಾಡುವ ದೊಡ್ಡ ಗ್ಯಾಂಗ್‌‌ನ ಸದಸ್ಯರಾದ ಇಬ್ಬರು ವೈದ್ಯರಿಂದ 1.8 ಲಕ್ಷ ರೂ.ಗೆ ಮಗುವನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ಲಾಟ್‌ಫಾರ್ಮ್‌ನಿಂದ ಮಗುವನ್ನು ಎತ್ತಿಕೊಂಡು ಹೋಗುವ ದೃಶ್ಯಗಳು ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದೀಗ ಪೊಲೀಸರು ಮಗುವನ್ನು ಎತ್ತಿಕೊಂಡು ಹೋದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ.

ಮಥುರಾದ ರೈಲ್ವೇ ಪೊಲೀಸರು ಮಗುವನ್ನು ಅವರ ತಾಯಿಗೆ ಹಸ್ತಾಂತರಿಸಿದ್ದಾರೆ. ಬಂಧಿತ ವೈದ್ಯರಿಂದ ದುಡ್ಡನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಈ ಬಗ್ಗೆ ಹೇಳಿಕೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಮಗುವನ್ನು ಅಪಹರಣ ನಡೆಸಿದೆ ಎಂದು ಹೇಳಿದ್ದಾರೆ.

“ದೀಪ್ ಕುಮಾರ್ ಎಂಬ ವ್ಯಕ್ತಿ ಮಗುವನ್ನು ಕದ್ದೊಯ್ದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ. ಅವನು ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‌‌‌ವೊಂದರ ಭಾಗವಾಗಿದ್ದಾರೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮಗು ಯಾರ ಮನೆಯಲ್ಲಿದೆ ಎಂದು ನಾವು ವಿಚಾರಣೆ ನಡೆಸಿದಾಗ ಮಗು ಪತ್ತೆಯಾಗಿದೆ. ಆರೋಪಿಗಳಿಗೆ ಒಬ್ಬಳೇ ಮಗಳಿದ್ದು, ಗಂಡು ಮಗುವೊಂದನ್ನು ಬಯಸಿದ್ದರು. ಅದಕ್ಕಾಗಿ ಅವರು ಮಕ್ಕಳ ಕಳ್ಳತನ ಮಾಡುವ ಗ್ಯಾಂಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು” ಎಂದು ಮುಷ್ತಾಕ್ ಪತ್ರಕರ್ತರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

ಘಟೆನೆಯ ಬಗ್ಗೆ ಬಂಧಿತ ಕಾರ್ಪೊರೇಟರ್ ಹಾಗೂ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಆಗಸ್ಟ್ 23 ರ ರಾತ್ರಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು  ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದನು. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...