Homeದಲಿತ್ ಫೈಲ್ಸ್ಯುಪಿ: ಲಖಿಂಪುರಖೇರಿಯ ಅಪ್ರಾಪ್ತ ದಲಿತ ಸಹೋದರಿಯರ ಅತ್ಯಾಚಾರ, ಹತ್ಯೆ - 6 ಮಂದಿ ಬಂಧನ

ಯುಪಿ: ಲಖಿಂಪುರಖೇರಿಯ ಅಪ್ರಾಪ್ತ ದಲಿತ ಸಹೋದರಿಯರ ಅತ್ಯಾಚಾರ, ಹತ್ಯೆ – 6 ಮಂದಿ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖೀಂಪುರದಲ್ಲಿ 17 ಮತ್ತು 15ರ ಹರೆಯದ ಇಬ್ಬರು ದಲಿತ ಸಹೋದರಿಯರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರು ಜನನ್ನು ಬಂಧಿಸಿದ್ದಾರೆ. ಸಹೋದರಿಯರಿಬ್ಬರ ಮೇಲೆ ಐವರು ಅತ್ಯಾಚಾರ ಎಸಗಿ, ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್, ಆರಿಫ್ ಮತ್ತು ಗೌತಮ್‌‌ ಛೋಟು ಎಂದು ಗುರುತಿಸಲಾಗಿದೆ. ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್ ಮತ್ತು ಜುನೈದ್ ಅತ್ಯಾಚಾರವೆಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯರು ಮದುವೆಗೆ ಒತ್ತಾಯಿಸಿದಾಗ, ದುಷ್ಕರ್ಮಿಗಳು ಅವರ ದುಪಟ್ಟಾದಿಂದ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಕರೀಮುದ್ದೀನ್ ಮತ್ತು ಆರೀಫ್ ಕೊಲೆಯನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. “ಬಾಲಕಿಯರ ದೇಹವನ್ನು ಮರಕ್ಕೆ ನೇಣು ಹಾಕಿ ಇದು ಆತ್ಮಹತ್ಯೆ ಎಂದು ತೋರುವಂತೆ ಮಾಡಿದ್ದಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಅಪ್ರಾಪ್ತ ದಲಿತ ಬಾಲಕಿಯರಿಬ್ಬರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅತ್ಯಾಚಾರ, ಕೊಲೆ ಎಂದ ಕುಟುಂಬ

“ಬಾಲಕಿಯರನ್ನು ದುಷ್ಕರ್ಮಿಗಳು ಅಪಹರಿಸಿರಲಿಲ್ಲ. ಸಹೋದರಿಯರು ಸುಹೇಲ್ ಮತ್ತು ಜುನೈದ್ ಅವರೊಂದಿಗೆ ಸ್ನೇಹಿತರಾಗಿದ್ದರಿಂದ, ಸ್ವಇಚ್ಛೆಯಿಂದ ಅವರೊಂದಿಗೆ ಬೈಕ್‌ನಲ್ಲಿ ತೆರಳಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. “ತಮ್ಮ ಹೆಣ್ಣು ಮಕ್ಕಳನ್ನು ಮನೆಯಲ್ಲಿ ಇರುವಾಗ ಮೂವರು ದುಷ್ಕರ್ಮಿಗಳು ಅವರನ್ನು ಅಪಹರಣ ನಡೆಸಿದ್ದಾರೆ” ಎಂದು ಹತ್ಯೆಗೀಡಾದ ಬಾಲಕಿಯರ ತಾಯಿ ಆರೋಪಿಸಿದ್ದರು.

ಆರೋಪಿಗಲ್ಲಿ ಚೇತರಾಮ್ ಎಂಬವರ ಮಗನಾದ ಗೌತಮ್‌‌ ಛೋಟು ಬಾಲಕಿಯರ ನರೆ ಮನೆಯವನಾಗಿದ್ದು, ದುಷ್ಕರ್ಮಿಗಳಿಗೆ ಬಾಲಕಿಯರನ್ನು ಪರಿಚಯಿಸಲು ಸಹಾಯ ಮಾಡಿದ್ದನು ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಬಂಧಿತರೆಲ್ಲರೂ ಪಕ್ಕದ ಗ್ರಾಮದವರಾಗಿದ್ದು, ಐವರನ್ನು ನಿನ್ನೆ ಬಂಧಿಸಲಾಗಿತ್ತು. ಒಬ್ಬನನ್ನು ಇಂದು ಬೆಳಗ್ಗೆ ಬಂಧಿಸುವಾಗ ಎನ್‌ಕೌಂಟರ್‌ ನಡೆಸಲಾಗಿದ್ದು, ಸಿಕ್ಕಿಬಿದ್ದಿದ್ದಾನೆ. “ಅಪರಾಧದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ನಾವು ಬಂಧಿಸಿದ್ದೇವೆ” ಎಂದು ಪೊಲೀಸ್‌ ಅಧಿಕಾರಿ ಸಂಜೀವ್ ಸುಮನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:  ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಶವವಾಗಿ ಪತ್ತೆಯಾಗುವ ಮೂರು ಗಂಟೆಗಳ ಮೊದಲು ಅವರನ್ನು ಅಪಹರಿಸಲಾಗಿತ್ತು ಎಂದು ಬಾಲಕಿಯರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಮೂವರು ಯುವಕರು ತನ್ನ ಹೆಣ್ಣು ಮಕ್ಕಳನ್ನು ಮೋಟಾರ್ ಸೈಕಲ್‌ಗಳಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಳಿಕ ಕುಟುಂಬದವರು ಕಬ್ಬಿನ ಗದ್ದೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರ ಶವಗಳನ್ನು ಪತ್ತೆ ಮಾಡಿದ್ದಾರೆ. ಬಾಲಕಿಯರ ಶವ ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾವುದೇ ಗಾಯಗಳಿರಲಿಲ್ಲ ಎಂದು ಎನ್‌ಡಿಟಿವಿ ವರದ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...