ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್ ಮುಖ್ಯಸ್ಥರ ಚುನಾವಣೆಯಲ್ಲಿ ಮತದಾರರನ್ನು ಅಪಹರಿಸಲಾಗಿದೆ. ಬಲ ಪ್ರಯೋಗ ನಡೆಸಿ ಮತ ಚಲಾವಣೆ ಮಾಡದಂತೆ ತಡೆ ಹಿಡಿಯಲಾಗಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಇಂತಹ ಕೆಲಸ ಮಾಡುವ ಮೂಲಕ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಅಪಹಾಸ್ಯ ಮಾಡಿದ್ದಾರೆ ಎಂದು  ಅಖಿಲೇಶ್ ಯಾದವ್ ಹೇಳಿದ್ದಾರೆ. ಈ ಚುನಾವಣೆಗಳಲ್ಲಿ 75 ಸ್ಥಾನಗಳಲ್ಲಿ 67 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಹೇಳಿಕೊಂಡಿದೆ.

“ತನ್ನ ಸೋಲನ್ನು ಗೆಲುವಾಗಿ ಪರಿವರ್ತಿಸಲು, ಬಿಜೆಪಿ ಮತದಾರರನ್ನು ಅಪಹರಿಸಿದೆ, ಪೊಲೀಸ್ ಮತ್ತು ಆಡಳಿತದ ಸಹಾಯದಿಂದ ಬಲವಂತವಾಗಿ ಮತದಾರರು ಮತ ಚಲಾಯಿಸುವುದನ್ನು ತಡೆದಿದೆ. ಬಿಜೆಪಿ ಎಲ್ಲಾ ಪ್ರಜಾಪ್ರಭುತ್ವದ ನೀತಿಗಳನ್ನು ಅಪಹಾಸ್ಯ ಮಾಡಿದೆ, ಇಂತಹದನ್ನು ಈ ಹಿಂದೆ ನಾವು ನೋಡಿಲ್ಲ” ಎಂದು ಅಖಿಲೇಶ್ ಯಾದವ್ ಪಕ್ಷದ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದೊಂದಿಗೆ ರಫೇಲ್ ಒಪ್ಪಂದದ ತನಿಖೆಗೆ ನ್ಯಾಯಾಧೀಶರನ್ನು ನೇಮಿಸಿದ ಫ್ರಾನ್ಸ್‌; ಮೋದಿಗೆ ಹಿನ್ನಡೆ?

ಜಿಲ್ಲಾ ಪಂಚಾಯತ್ ಸದಸ್ಯರ ಚುನಾವಣೆಯಲ್ಲಿ ಹೆಚ್ಚಿನ ಗೆಲುವು ಎಸ್‌ಪಿ ಪರವಾಗಿದ್ದರೆ, ಜಿಲ್ಲಾ ಪಂಚಾಯತ್ ಮುಖ್ಯಸ್ಥರ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ್ದು ವಿಚಿತ್ರ. ಅಧಿಕಾರಿಗಳ ಅಕ್ರಮ ಕೂಡ ಮುನ್ನೆಲೆಗೆ ಬಂದಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಈ ಬಗ್ಗೆ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಆಡಳಿತ ಪಕ್ಷದ “ಸರ್ವಾಧಿಕಾರ” ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಪರ ಸದಸ್ಯ ಅರುಣ್ ರಾವತ್ ಅವರನ್ನು ಲಕ್ನೋದಲ್ಲಿ ಅಪಹರಿಸಲಾಗಿದೆ. ಎಸ್‌ಪಿ ಅಭ್ಯರ್ಥಿ ವಿಜಯ್ ಲಕ್ಷ್ಮಿಯನ್ನು ಡಿಎಂ ಕಚೇರಿಯಲ್ಲಿಯೇ ಕುಳಿತುಕೊಳ್ಳುವಂತೆ ಮಾಡಲಾಗಿದ್ದು, ಅವರ ಪತಿ ಶಾಸಕ ಅಂಬರೀಶ್ ಪುಷ್ಕರ್ ಅವರನ್ನು ಭೇಟಿಯಾಗದಂತೆ ತಡೆಯಲಾಗಿದೆ. ಎಸ್‌ಪಿ ಕಾರ್ಯಕರ್ತರು ಮತ್ತು ಮಹಿಳೆಯರು ಪ್ರತಿಭಟಿಸಿದಾಗ ಆಡಳಿತ ಪಕ್ಷ ಅಸಭ್ಯವಾಗಿ ವರ್ತಿಸಿದೆ ಎಂದು ಆರೋಪಿಸಿದ್ದಾರೆ.

“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆಗಳಲ್ಲಿ ಆಡಳಿತರೂಢ ಬಿಜೆಪಿಗೆ ಉತ್ತರ ನೀಡಲು ಸಾರ್ವಜನಿಕರು ಸಿದ್ಧರಾಗಿದ್ದಾರೆ. ಎಸ್‌ಪಿ ಸರ್ಕಾರ ರಚನೆಯಾದ ನಂತರವೇ ಪ್ರಜಾಪ್ರಭುತ್ವವನ್ನು ರಾಜ್ಯದಲ್ಲಿ ಪುನಃಸ್ಥಾಪಿಸಲಾಗುತ್ತದೆ. ಆಗ ಮಾತ್ರ ನ್ಯಾಯ ದೊರೆಯುತ್ತದೆ “ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಎಸ್‌ಪಿಗೆ ಹಿನ್ನಡೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

2 COMMENTS

  1. The proud of Akhilesh Yadhav to avoid collision with congress made this disaster. It’s right punishment for over confidence.
    PunditVidya
    Mangalore

LEAVE A REPLY

Please enter your comment!
Please enter your name here