Homeಚಳವಳಿಲಕ್ನೋ ಕಿಸಾನ್ ಮಹಾಪಂಚಾಯತ್: ಬಿಜೆಪಿ, ಓವೈಸಿ ವಿರುದ್ಧ ರಾಕೇಶ್ ಟಿಕಾಯತ್ ವಾಗ್ದಾಳಿ

ಲಕ್ನೋ ಕಿಸಾನ್ ಮಹಾಪಂಚಾಯತ್: ಬಿಜೆಪಿ, ಓವೈಸಿ ವಿರುದ್ಧ ರಾಕೇಶ್ ಟಿಕಾಯತ್ ವಾಗ್ದಾಳಿ

- Advertisement -
- Advertisement -

ಬಿಜೆಪಿ ಮತ್ತು ಓವೈಸಿ ಚಿಕ್ಕಪ್ಪ- ಸಹೋದರನ ಮಗ(chacha-bhatija) ಇದ್ದಂತೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್‌ ಲಕ್ನೋ ಕಿಸಾನ್ ಮಹಾಪಂಚಾಯತ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಒಕ್ಕೂಟ ಸರ್ಕಾರದ ನಿರ್ಧಾರದ ನಂತರ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ರದ್ದುಗೊಳಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ವ್ಯಂಗ್ಯವಾಡಿದ್ದಾರೆ.

’ಓವೈಸಿ ಮತ್ತು ಬಿಜೆಪಿ ನಡುವಿನ ಸಂಬಂಧ ಚಿಕ್ಕಪ್ಪ- ಸಹೋದರನ ಮಗ ಇದ್ದಂತೆ ಎಂದು ಹೇಳಿದ್ದಾರೆ. ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆಯನ್ನು ರದ್ದುಗೊಳಿಸಲು ಓವೈಸಿ ಟಿವಿಯಲ್ಲಿ ಮಾತನಾಡಬಾರದು. ಅದರ ಬದಲು ನೇರವಾಗಿ ಬಿಜೆಪಿಯೊಂದಿಗೆ ಮಾತನಾಡಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರು ವಿಷಯಗಳನ್ನು ಉಲ್ಲೇಖಿಸಿ ಪ್ರಧಾನಿಗೆ ಪತ್ರ ಬರೆದ ಸಂಯುಕ್ತ ಕಿಸಾನ್ ಮೋರ್ಚಾ

ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಮೇರೆಗೆ ಲಕ್ನೋದಲ್ಲಿ ನಡೆಯಲಿರುವ ಕಿಸಾನ್ ಮಹಾಪಂಚಾಯತ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದಾರೆ. ಇದೇ ವೇಳೆ ಹಲವು ರೈತ ಮುಖಂಡರು ವೇದಿಕೆಯನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಅಕ್ಟೋಬರ್‌ 3 ರಂದು ನಡೆದ ರೈತರ ಹತ್ಯಾಕಾಂಡಕ್ಕೆ ನ್ಯಾಯವನ್ನು ಕೋರಿ ಇಂದು ಲಕ್ನೋ ಕಿಸಾನ್ ಮಹಾಪಂಚಾಯತ್ ನಡೆಯುತ್ತಿದೆ.

ನವೆಂಬರ್ 26 ರಂದು ರೈತ ಹೋರಾಟದ ಒಂದು ವರ್ಷದ ನೆನಪಿಗೆ ಎಲ್ಲಾ ಗಡಿಗಳಲ್ಲಿ ಹೆಚ್ಚಿನ ರೈತರು ಸೇರಿ ಕಾರ್ಯಕ್ರಮ ನಡೆಸುತ್ತಾರೆ. ನವೆಂಬರ್ 29 ರಂದು ಪಾರ್ಲಿಮೆಂಟ್ ಚಲೋ ನಡೆಯಲಿದೆ ಎಂದು ಸಿಂಘು ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಲ್ಬೀರ್ ಸಿಂಗ್ ದಲ್ಲೆವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...