Homeಮುಖಪುಟಉತ್ತರ ಪ್ರದೇಶ: ಠಾಣೆಯಲ್ಲಿ ಯುವಕನ ಅನುಮಾನಸ್ಪದ ಸಾವು, ಐವರು ಪೊಲೀಸರ ಅಮಾನತು

ಉತ್ತರ ಪ್ರದೇಶ: ಠಾಣೆಯಲ್ಲಿ ಯುವಕನ ಅನುಮಾನಸ್ಪದ ಸಾವು, ಐವರು ಪೊಲೀಸರ ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಯುವಕ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಯುವಕ ಅಲ್ತಾಫ್‌ನ ವಿರುದ್ಧ ಯುವತಿಯನ್ನು ಅಪಹರಿಸಿ ಬಲವಂತದ ಮದುವೆಗೆ ಸಂಬಂಧಿಸಿದಂತೆ ಕಳೆದ ವಾರ ಪ್ರಕರಣದ ದಾಖಲಾಗಿತ್ತು. ಮಂಗಳವಾರ ಬೆಳಗ್ಗೆ ಅಲ್ತಾಫ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಅವರು ಠಾಣೆಯಲ್ಲೇ ಮೃತಪಟ್ಟಿದ್ದಾರೆ.

“ಅಪ್ತಾಫ್‌ ಪೊಲೀಸ್ ಠಾಣೆಯಲ್ಲಿ ಶೌಚಾಲಯಕ್ಕೆ ಹೋಗಬೇಕು ಎಂದು ಕೇಳಿದ್ದರು. ಕೆಲವು ನಿಮಿಷಗಳಾದರೂ ಅವರು ಶೌಚಾಲಯದಿಂದ ಹಿಂತಿರುಗದಿದ್ದಾಗ, ಪೊಲೀಸರು ಒಳಗೆ ಹೋಗಿ ನೋಡಿದ್ದಾರೆ. ಅಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ” ಎಂದು ಇಟಾಹ್‌ನ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ಆದರೆ, ಮೃತ ಅಲ್ತಾಫ್ ಅವರ ತಂದೆ ಚಾಂದ್ ಮಿಯಾನ್, “ನಾನು ನನ್ನ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದೇನೆ. ಆತನ ಸಾವಿನಲ್ಲಿ ಪೊಲೀಸರ ಕೈವಾಡವಿದೆ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಸಿಬಿಐ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯ ಸೇರಿದಂತೆ ದೇಶದ ಎಲ್ಲಾ ಪೊಲೀಸ್ ಠಾಣೆಗಳು ಮತ್ತು ತನಿಖಾ ಸಂಸ್ಥೆಗಳಲ್ಲಿ night vision ಮತ್ತು ಆಡಿಯೋ ರೆಕಾರ್ಡಿಂಗ್ ಹೊಂದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಆದರೆ, ಉತ್ತರ ಪ್ರದೇಶದ ಎಷ್ಟು ಪೊಲೀಸ್ ಠಾಣೆಗಳಲ್ಲಿ ಇದುವರೆಗೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104


ಇದನ್ನೂ ಓದಿ: ದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...