Homeಮುಖಪುಟಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ

ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ

- Advertisement -
- Advertisement -

ಕಳೆದ ವರ್ಷ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

2020 ರ ಆಗಸ್ಟ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಬಾಲ್‌ ಗೋವಿಂದ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ ಎಂದು ಜಾನ್‌ಪುರದ ವಿಶೇಷ ಫೋಕ್ಸೋ (Protection of Children from Sexual Offences) ನ್ಯಾಯಾಲಯ ತಿಳಿಸಿದೆ.

ಮರಣದಂಡನೆ ಜೊತೆಗೆ ನ್ಯಾಯಾಲಯವು ಅಪರಾಧಿಗೆ 10,000 ರೂಪಾಯಿ ದಂಡ ಕೂಡ ವಿಧಿಸಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ಅಪರಾಧಿ ಬಾಲ್ ಗೋವಿಂದ್ ಬಾಲಕಿಯನ್ನು ಅಪಹರಿಸಿ ನಂತರ ಮಡಿಯಾಹು ಪ್ರದೇಶದ ಹಳ್ಳಿಯಲ್ಲಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿಯ ತಂದೆ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರು ಈ ಪ್ರಕರಣವನ್ನು ಪರಿಣಾಮಕಾರಿಯಾಗಿ ತನಿಖೆ ನಡೆಸಿದ ಕಾರಣ ಕೇವಲ ಏಳು ತಿಂಗಳುಗಳಲ್ಲಿ ಅಪರಾಧಿಗೆ ಶಿಕಕ್ಷೆಯಾಗಿದೆ. ನ್ಯಾಯಾಲಯದಲ್ಲಿ ಪೊಲೀಸರು ಅಚ್ಚುಕಟ್ಟಾಗಿ ಪ್ರಕರಣವನ್ನು ಹಿಡಿದಿಟ್ಟರು ಎಂದು ಪೊಲೀಸ್ ಅಧಿಕಾರಿ ಅವಸ್ಥಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಕಾನೂನು ಸುವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದೆ. ಇತ್ತಿಚೆಗಷ್ಟೇ ತಂದೆಯೇ ತನ್ನ ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶನ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ವರದಿಯಾಗಿತ್ತು.


‌ಇದನ್ನೂ ಓದಿ: ಟಿವಿ ಆಂಕರ್ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಟಿ.ನರಸೀಪುರ ತಾಲ್ಲೂಕಿನ ಸುದ್ದಿಗಳನ್ನು ಗೌರಿ ಮೀಡಿಯಾದಲ್ಲಿ ಪ್ರಕಟಿಸಿವಿರಾ…

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...