Homeಮುಖಪುಟಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ತ್ಯಾಗಿ ಸಮುದಾಯ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

- Advertisement -
- Advertisement -

ಕೆಲವು ದಿನಗಳ ಹಿಂದೆ ಮಹಿಳೆಯನ್ನು ನಿಂದಿಸಿ, ಅಸಭ್ಯವಾಗಿ ವರ್ತಿಸಿ, ಪೊಲೀಸ್‌ ವಿಚಾರಣೆಗೆ ಒಳಪಟ್ಟಿರುವ ಹಾಗೂ ಬಿಜೆಪಿ ನಾಯಕ ಎಂದೇ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ನೋಯ್ಡಾದಲ್ಲಿ ಬೃಹತ್ ರ್ಯಾಲಿಯನ್ನು ತ್ಯಾಗಿ ಸಮುದಾಯ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

ಶ್ರೀಕಾಂತ್ ತ್ಯಾಗಿ ಆಡಳಿತರೂಢ ಬಿಜೆಪಿಯ ಸದಸ್ಯನಲ್ಲ ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗೌತಮ್ ಬುದ್ಧ ನಗರ ಸಂಸದರ ವಿರುದ್ಧ ತ್ಯಾಗಿ ಸಮುದಾಯವು ಅಸಮಾಧಾನ ಹೊರಹಾಕಿದೆ. ಆದರೆ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಮಹೇಶ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್‌ ತಿಂಗಳ ಮೊದಲ ವಾರ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಮೌನ ಪ್ರತಿಭಟನೆ ನಡೆಸಿದಾಗ ಬಳಸಲಾದ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿವೆ. ಆ ಪೋಸ್ಟರ್‌ಗಳಲ್ಲಿ ತ್ಯಾಗ ಸಮುದಾಯಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀಕಾಂತ್ ತ್ಯಾಗಿ ಅವರನ್ನು ಬೆಂಬಲಿಸಿ ಸಂಯುಕ್ತ ತ್ಯಾಗಿ ಸ್ವಾಭಿಮಾನ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನಾ ಸಭೆಯು ಗೆಜ್ಜಾ ಗ್ರಾಮದ ರಾಮಲೀಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ತ್ಯಾಗಿ ಸಮುದಾಯದ ನೂರಾರು ಮಂದಿ ಇಲ್ಲಿಗೆ ಆಗಮಿಸಿದ್ದರು.

ಶ್ರೀಕಾಂತ್ ತ್ಯಾಗಿ ಅವರು ಮಾಡಿರುವ ಹಿಂಸೆ ಹಾಗೂ ನಿಂದನೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಾಗಲಿ. ಆದರೆ ಅವರ ಪತ್ನಿ ಮತ್ತು ಚಿಕ್ಕಮ್ಮನನ್ನು ಪೊಲೀಸ್ ಠಾಣೆಗೆ ಕರೆಸಿರುವುದು ತಪ್ಪು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಪೊಲೀಸರು ಶ್ರೀಕಾಂತ್ ಅವರ ಚಿಕ್ಕಮ್ಮನನ್ನು ಜೀಪ್‌ನಲ್ಲಿ ಕರೆದೊಯ್ದು ನಾಲ್ಕು ದಿನಗಳ ಕಾಲ ಪಶ್ಚಿಮ ಯುಪಿಯಲ್ಲಿ ಸುತ್ತಾಡಿದರು. ಇದು ಅಮಾನವೀಯ ನಡೆ” ಎಂದು ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿ ತ್ರಿಲೋಕ್ ತ್ಯಾಗಿ ಹೇಳಿದ್ದಾರೆ.

ತ್ಯಾಗಿ ಅವರು ಸಮಾಜದ ನಿಯಮಗಳಿಗೆ ಬದ್ಧರಾಗಿದ್ದರೆ ಮತ್ತು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸದಿದ್ದರೆ ಸಮಸ್ಯೆ ದೊಡ್ಡದಾಗುತ್ತಿರಲಿಲ್ಲ ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಹೇಳಿದ್ದಾರೆ.

“ಸಮಾಜದ ನಿಯಮಗಳನ್ನು ಉಲ್ಲಂಘಿಸಿದ್ದು ಅವರ ಮೊದಲ ತಪ್ಪು. ಎರಡನೆಯದಾಗಿ, ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಳಸಿದ ಭಾಷೆ ಸಮಸ್ಯೆಯನ್ನು ದೊಡ್ಡದಾಗಿಸಿತು” ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಪ್ರಧಾನ ಕಾರ್ಯದರ್ಶಿ ಮಹಿಮಾ ಜೋಶಿ ಹೇಳಿದ್ದಾರೆ.

ತಮ್ಮ ಪ್ರತಿಭಟನೆ ಕೇವಲ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ದಾಖಲಾದ ಬಳಿಕ ಆತ ಪರಾರಿಯಾಗಿದ್ದನು.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ್ದರು. ಬಳಿಕ ತ್ಯಾಗಿ ಸಿಕ್ಕಿಬಿದ್ದಿದ್ದನು.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...