ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರದ ನಡೆದಿದ್ದು, ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಸಂಜೆ ಉತ್ತರ ಪ್ರದೇಶ ಮೂಲಕ ವೈದ್ಯ ವಿದ್ಯಾರ್ಥಿನಿಯೊರ್ವಳು ತನ್ನ ಗೆಳೆಯನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಳು. ಅಲ್ಲಿಂದ ಲಲಿತಾದ್ರಿಪುರಕ್ಕೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಆರು ಜನರ ತಂಡ ಹುಡುಗನ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ನಾವು ವಿಹಾರಕ್ಕೆಂದು ಲಲಿತಾದ್ರಿಪುರಕ್ಕೆ ಹೋದಾಗ ಅಲ್ಲಿ ಮದ್ಯಪಾನ ಮಾಡುತ್ತಿದ್ದ ಗುಂಪೊಂದು ನಮ್ಮನ್ನು ಸುತ್ತುವರಿದು ಅಶ್ಲೀಲವಾಗಿ ರೇಗಿಸಿದರು. ಪ್ರತಿರೋಧ ತೋರಿದ ನನಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿದ. ಆಗ ನನ್ನ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಒಬ್ಬನನ್ನು ಹೊರತುಪಡಿಸಿ ಉಳಿದ ಎಲ್ಲರೂ ಕನ್ನಡ ಮಾತನಾಡುತ್ತಿದ್ದರು” ಎಂದು ವಿದ್ಯಾರ್ತಿನಿಯ ಗೆಳೆಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸದ್ಯಕ್ಕೆ ಆತ ಮತ್ತು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೂರು ದಾಖಲಾದ ಬಳಿಕ ಪ್ರಕರಣ ದಾಖಲಿಸಿರುವ ಪೊಲೀಸರು ಸ್ಥಳ ಪರೀಶಿಲನೆ ನಡೆಸಿ ಸಾಕ್ಷ್ಯ ಸಂಗ್ರಹಣೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ


