Homeಕರೋನಾ ತಲ್ಲಣಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

- Advertisement -
- Advertisement -

ಉತ್ತರ ಪ್ರದೇಶದ ಕಂದಾಯ ಸಚಿವ ವಿಜಯ್ ಕಶ್ಯಪ್ ಮಂಗಳವಾರ ಗುರಗಾಂವ್ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ನಿಧನರಾದರು.

ಮುಜಫರ್‌ನಗರ ಜಿಲ್ಲೆಯ ಚಾರ್ತವಾಲ್ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ (56) ಗುರಗಾಂವ್‌ನ ಮೆದಾಂತ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ವೈರಸ್‌ಗೆ ಬಲಿಯಾದ ಮೂರನೇ ಯುಪಿ ಸಚಿವರು. ಕಳೆದ ವರ್ಷ ಉತ್ತರ ಪ್ರದೇಶದ ಮಂತ್ರಿಗಳಾದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾನ್ ಸೋಂಕಿನಿಂದ ಸಾವನ್ನಪ್ಪಿದ್ದರು. ಕೋವಿಡ್‌ ಎರಡನೇ ಅಲೆಯಲ್ಲಿ ಉತ್ತರಪ್ರದೇಶದ ಬಿಜೆಪಿಯ ಐವರು ಶಾಸಕರು (ಕಶ್ಯಪ್ ಸೇರಿ) ಬಲಿಯಾಗಿದ್ದಾರೆ.

ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ. ಕಶ್ಯಪ್ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಬದುಕನ್ನು ಮೀಸಲಿಟ್ಟಿದ್ದರು ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶ ಸರ್ಕಾರದಲ್ಲಿ ಬಿಜೆಪಿ ಮುಖಂಡ ಮತ್ತು ಸಚಿವರಾದ ವಿಜಯ್ ಕಶ್ಯಪ್ ಅವರ ನಿಧನ ತುಂಬಾ ದುಃಖಕರವಾಗಿದೆ. ಅವರು ತಳಮಟ್ಟದ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಮತ್ತು ಯಾವಾಗಲೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಜೀವನವನ್ನು ಮೀಸಲಿಟ್ಟಿದ್ದರು. ಈ ದುಃಖದ ಕ್ಷಣದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಓಂ ಶಾಂತಿ!” ಎಂದು ಪ್ರಧಾನಿ ಪಿಎಂ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕಶ್ಯಪ್ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಚಾರ್ತವಾಲ್‌ನ ಶಾಸಕರಾದ ಕಶ್ಯಪ್ ಅವರು ಮಂತ್ರಿಯಾಗಿ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದರು. ಅವರ ಸಾವಿನಲ್ಲಿ ಜನರು ತಮ್ಮ ನಿಜವಾದ ಹಿತೈಷಿಯನ್ನು ಕಳೆದುಕೊಂಡಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರ ನಿಧನಕ್ಕೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಎರಡನೇ ಕೊರೋನಾ ವೈರಸ್ ಅಲೆಯಲ್ಲಿ ಮೃತಪಟ್ಟ ಐದನೇ ಉತ್ತರಪ್ರದೇಶದ ಬಿಜೆಪಿ ಶಾಸಕ ಕಶ್ಯಪ್.

ಇದಕ್ಕೂ ಮುನ್ನ ಸಾಲೋನ್ ಕ್ಷೇತ್ರದ ಶಾಸಕ ದಾಲ್ ಬಹದ್ದೂರ್ ಕೋರಿ, ಕೇಸರ್ ಸಿಂಗ್ ಗಂಗ್ವಾರ್ (ನವಾಬ್‌ಗಂಜ್), ರಮೇಶ್ ದಿವಾಕರ್ (ಔರಿಯಾ) ಮತ್ತು ಸುರೇಶ್ ಕುಮಾರ್ ಶ್ರೀವಾಸ್ತವ (ಲಕ್ನೋ ವೆಸ್ಟ್) ಸೋಂಕಿಗೆ ಬಲಿಯಾಗಿದ್ದರು.


ಇದನ್ನೂ ಓದಿ: ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...