Homeಕರ್ನಾಟಕಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಹಿಂದುತ್ವ ವಿಚಾರವಾಗಿ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ‘ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯನ್ನು ಜಾರಿ ಮಾಡುತ್ತೇವೆ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಅವರನ್ನು ಎನ್‌ಕೌಂಟರ್ ಮಾಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಜಾರಿಗೆ ಬರುತ್ತದೆ ಎಂದು ಹೇಳಿದ್ದಾರೆ. ಮುಂದುವರೆದು, ”ಹಿಂದೂ ಮತ್ತು ದೇಶದ ವಿರುದ್ಧ ಯಾರಾದರು ಮಾತಾಡಿದರೆ ಶೂಟ್ ಮಾಡುವುದು ಖಚಿತ, ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ​ ಎನ್​ಕೌಂಟರ್ ನಿಶ್ಚಿತ, ರಸ್ತೆ ಮಧ್ಯೆಯೇ ನಿಲ್ಲಿಸಿ ಗುಂಡು ಹಾರಿಸಲಾಗುತ್ತದೆ ಎಂದು ವಿವಾದ ಎಬ್ಬಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಣ್ಣತಮ್ಮಂದಿರ (ಮುಸ್ಲಿಂ ಮಾಫಿಯಾ) ಎನ್​ಕೌಂಟರ್ ಆಯ್ತು. ಹೀಗಾಗಿ ಕೆಲವರು ಜೈಲಿನಿಂದ ಹೊರಬರಲು ಹೆದರುತ್ತಿದ್ದಾರೆ ಎಂದು ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ದುಷ್ಕರ್ಮಿಗಳು ಗುಂಡುಹಾರಿಸಿ ಕೊಂದ ಘಟನೆಯನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

ಉತ್ತರ ಪ್ರದೇಶದಲ್ಲಿ ವಾಹನಗಳು ಪಲ್ಟಿಯಾಗುತ್ತಲೇ ಇರುತ್ತದೆ. ಹಾದಿಬೀದಿಯಲ್ಲಿ ರೌಡಿಗಳ ಹೆಣಗಳು ಉರುಳುತ್ತಲೇ ಇರುತ್ತದೆ ಎಂದು ಹೇಳುವ ಮೂಲಕ ಸರ್ಕಾರವೇ ಆ ಅಪಘಾತಗಳನ್ನು ಮಾಡಿಸುತ್ತದೆ ಎನ್ನುವ ಅನುಮಾನ ಹುಟ್ಟುಹಾಕಿದ್ದಾರೆ. ಕರ್ನಾಟಕದಲ್ಲಿ ಯಾರಾದರು ಹಾರಾಡಿದರೆ ಎನ್​ಕೌಂಟರ್ ಖಚಿತ ಎಂದಿದ್ದಾರೆ.

”ಟಿಪ್ಪು ಸುಲ್ತಾನ ಹರಾಂ ಕೋರ್”: ಯತ್ನಾಳ್ ಹೇಳಿಕೆ

ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳನ್ನು ಕೊಂದಿದ್ದಾನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ಟಿಪ್ಪು ಫೋಟೋ ತೆಗೆದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್​ ಫೋಟೋ ಹಾಕುತ್ತೇವೆ ಎಂದು ಹೇಳಿದ್ದಾರೆ.

ಈ ವೇಳೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ”ಮೂರು ಬಿಟ್ಟವರು ಕಾಂಗ್ರೆಸ್​ ಪಕ್ಷದಲ್ಲಿ ಇದ್ದಾರೆ. ಇವತ್ತು ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಗ ಮಾತನಾಡಿದ್ದಾನೆ. ಎಲ್ಲ ಬಿಟ್ಟು ನಿಂತ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾಂಗ್ರೆಸ್​ನಲ್ಲಿದ್ದಾರೆ. ದೇಶದ ಜನರ ಆಶೀರ್ವಾದದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಇಂತಹ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ, ಈ ಬಗ್ಗೆ ಯೋಚನೆ ಮಾಡಿ” ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mooru bittu commission hodedu jailinalli irabekadavaru eega BJP yolage serikondiddare,addarinda mooru bittavaru bere pakshadalli siguvudilla.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...