Homeಮುಖಪುಟಉತ್ತರ ಪ್ರದೇಶ: ಜೈಲು ಶಿಕ್ಷೆಗೆ ಗುರಿಯಾದ ಬಿಜೆಪಿ ಸಂಸದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿ

ಉತ್ತರ ಪ್ರದೇಶ: ಜೈಲು ಶಿಕ್ಷೆಗೆ ಗುರಿಯಾದ ಬಿಜೆಪಿ ಸಂಸದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಉತ್ತರ ಪ್ರದೇಶದ ಇಟಾವಾದ ಬಿಜೆಪಿ ಸಂಸದ, ಆರೆಸ್ಸೆಸ್‌ನ ಮಾಜಿ ಪ್ರಚಾರಕ ರಾಮ್ ಶಂಕರ್ ಕಥೇರಿಯಾಗೆ 12 ವರ್ಷಗಳ ಹಿಂದಿನ ಹಲ್ಲೆ ಮತ್ತು ಗಲಭೆ ಪ್ರಕರಣದಲ್ಲಿ ಆಗ್ರಾದ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೂ ಅವರು ಭಾನುವಾರ ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ!

ಇಟಾವಾ ರೈಲು ನಿಲ್ದಾಣದ ಪುನರಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಈ ವೇಳೆ ಸಭೆಯನ್ನು ಉದ್ದೇಶಿಸಿ ಕೂಡ ಅವರು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅಮೃತ್ ಭಾರತ್ ಸ್ಟೇಷನ್ ಯೋಜನೆಯ ಭಾಗವಾಗಿ ದೇಶಾದ್ಯಂತ  508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಅಡಿಪಾಯ ಹಾಕಲಾಗುತ್ತಿದೆ. ಇಟಾವಾ ಕೂಡ ಇದರ ಭಾಗವಾಗಿದೆ.

2011 ರ ಪ್ರಕರಣದಲ್ಲಿ ಮೂರು ಬಾರಿ ಸಂಸದರಾಗಿರುವ ಕಥೇರಿಯಾ ಅವರು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅವರ ರಾಜಕೀಯ ಭವಿಷ್ಯದ ಬಗ್ಗೆ ಇಟಾವಾ ಸಮಾರಂಭದಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದರು. ಅವರನ್ನು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 (3) ರ ಅಡಿಯಲ್ಲಿ ಸಂಸದ  ಸ್ಥಾನದಿಂದ ಅವರನ್ನು ಅನರ್ಹಗೊಳಿಸುವ  ಸಾಧ್ಯತೆ ಇದೆ.

58ರ ಹರೆಯದ ಕಥೇರಿಯಾ ಅವರು ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷೆಗೆ ಗುರಿಯಾದ ವಿಷಯದ ಬಗ್ಗೆ ಏನನ್ನೂ ಹೇಳಲಿಲ್ಲ. ಆದರೆ ನಂತರ ಅವರು ನೀರಾವರಿ ಇಲಾಖೆಯ ಅತಿಥಿ ಗೃಹದಲ್ಲಿ ತಮ್ಮ ಬೆಂಬಲಿಗರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ತಿಳಿಸಿ  ನ್ಯಾಯಾಲಯದ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದರು ಎನ್ನಲಾಗಿದೆ.

ಪ್ರಕರಣವು ನವೆಂಬರ್ 16, 2011ರ ಹಿಂದಿನದಾಗಿದೆ. ಕಥೇರಿಯಾ ಮತ್ತು ಅವರ ಬೆಂಬಲಿಗರ ಗುಂಪು ಆಗ್ರಾದಲ್ಲಿ ವಿದ್ಯುತ್ ಬಿಲ್ ಹೆಚ್ಚಾಗಿ ನೀಡಿದ್ದಾರೆಂದು ದೂರು ಬಂದ ಬಳಿಕ ಟೊರೆಂಟ್ ಪವರ್ ಲಿಮಿಟೆಡ್‌ನ ಕೆಲವು ಉದ್ಯೋಗಿಗಳನ್ನು ಥಳಿಸಿದ್ದರು.

ಮಾಯಾವತಿ ನೇತೃತ್ವದ ಬಿಎಸ್‌ಪಿ ಸರ್ಕಾರದ ಅವಧಿಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಶಂಕರ್ ಕಥೇರಿಯಾ “ರಾಜಕೀಯ ಸೇಡಿನ” ಪ್ರಕರಣ ಎಂದು ಹೇಳಿದ್ದು, ನಾನು ದಲಿತ ನಾಯಕರಾಗಿ ಹೊರಹೊಮ್ಮುತ್ತಿರುವ ಕಾರಣ ಮತ್ತು ಬಿಎಸ್‌ಪಿಯ ಭದ್ರಕೋಟೆಯಾದ ಆಗ್ರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿರುವುದಕ್ಕೆ ಈ ರೀತಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಥೇರಿಯಾ ಅವರು 1984 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೊಂದಿಗೆ ಸ್ವಯಂಸೇವಕರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ನಾಲ್ಕು ವರ್ಷಗಳಲ್ಲಿ ಅವರನ್ನು ಅವರ ತವರು ಜಿಲ್ಲೆ ಇಟಾವಾದಲ್ಲಿ RSS ನ ನಗರ ಪ್ರಚಾರಕರಾಗಿ ನೇಮಿಸಲಾಗಿತ್ತು. ನಂತರ ಅವರು ಬುಲಂದ್‌ಶಹರ್ ಮತ್ತು ಆಗ್ರಾದಲ್ಲಿ ಆರ್‌ಎಸ್‌ಎಸ್ ಪ್ರಚಾರಕರಾಗಿ ಕೆಲಸ ಮಾಡಿದ್ದರು. ಅವರು ಆರ್‌ಎಸ್‌ಎಸ್-ಸಂಬಂಧಿತ ಸಂಘಟನೆಗಳಾದ ಸಾಮಾಜಿಕ ಸಮ್ರಸ್ತಾ ಸಂಘದಲ್ಲೂ ಕೆಲಸ ಮಾಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...