Homeಮುಖಪುಟಯುಪಿ: ದಲಿತ ಸಮುದಾಯಕ್ಕೆ ಸೇರಿದ ತಾಯಿ ಮಗಳ ಭೀಕರ ಹತ್ಯೆ

ಯುಪಿ: ದಲಿತ ಸಮುದಾಯಕ್ಕೆ ಸೇರಿದ ತಾಯಿ ಮಗಳ ಭೀಕರ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ತಾಯಿ ಹಾಗೂ ಅಪ್ರಾಪ್ತ ಮಗಳು ಭೀಕರವಾಗಿ ಕೊಲೆಯಾಗಿದ್ದಾರೆ. ಭಾನುವಾರ ಬೆಳಿಗ್ಗೆ ಅವರ ಮನೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಡನನ್ನು ಕಳೆದುಕೊಂಡಿರುವ ದಲಿತ ಮಹಿಳೆ ಮನೀಶಾ (32) ಹಾಗೂ ಆಕೆಯ ಮಗಳು ಇಶಾ (13) ಅವರು ಗಜರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕತೇರ್‌ನಲ್ಲಿ ವಾಸಿಸುತ್ತಿದ್ದರು. ಮನೀಶಾ ಅವರ ಪತಿ ಪವನ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರ ಮಗ ಮಾನ್ವಿಕ್ ತನ್ನ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಗ್ಗೆ ಹಾಲಿನ ವ್ಯಾಪಾರಿ ಮನೀಶಾ ಅವರ ಮನೆಯ ಬಾಗಿಲು ತೆರೆದಾಗ ತಾಯಿ-ಮಗಳ ಶವಗಳು ಮಂಚದ ಮೇಲಿದ್ದವು. ತಲೆಯಿಂದ ರಕ್ತ ಸೋರುತ್ತಿತ್ತು ಎಂದು ಸರ್ಕಲ್ ಅಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ಧಾರವಾಡ: ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್‌

ನಂತರ ಸ್ಥಳೀಯ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳ ಬಳಿ ಕಲ್ಲಿನ ತುಂಡು ಕೂಡ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ಸಾವಿಗೀಡಾಗಿರುವ ಪವನ್ ಅವರ ಆಸ್ತಿಯನ್ನು ಕಬಳಿಸಲು ತಾಯಿ ಮಗಳನ್ನು ಕೊಲ್ಲಲಾಗಿದೆ ಎಂದು ಆರೋಪಿಸಿ ಮನೀಷಾ ಅವರ ಕುಟುಂಬ ಸದಸ್ಯರು ಆಕೆಯ ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...