Homeರಾಷ್ಟ್ರೀಯಯುಪಿ: ಉನ್ನಾವೊ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಶವ ಪತ್ತೆ; ಆತ್ಯಾಚಾರ ಆರೋಪ

ಯುಪಿ: ಉನ್ನಾವೊ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಶವ ಪತ್ತೆ; ಆತ್ಯಾಚಾರ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೊದಲ್ಲಿ ಖಾಸಗಿ ಆಸ್ಪತ್ರೆಯ ಗೋಡೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ಐದು ದಿನಗಳ ಹಿಂದೆಯಷ್ಟೆ ಆರಂಭವಾಗಿದ್ದ ಆಸ್ಪತ್ರೆಯಲ್ಲಿ ಮಹಿಳೆಯು ನರ್ಸ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಅವರು ಕೆಲಸಕ್ಕೆ ಸೇರಿದ ಮೊದಲ ದಿನವೇ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಸ್ಪತ್ರೆಯ ಮಾಲೀಕ ಸೇರಿದಂತೆ ಮೂವರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

“ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಾವಿನ ಸಂದರ್ಭಗಳನ್ನು ಖಚಿತಪಡಿಸಿಕೊಳ್ಳಲು, ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದು ಹಾಕಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಶಶಿ ಸಿಂಗ್‌ ಹೇಳಿದ್ದರು.

ವರದಿಗಳ ಪ್ರಕಾರ, ಮಹಿಳೆಯು ನರ್ಸ್ ಆಗಿದ್ದು, ಶುಕ್ರವಾರ ಅವರ ಮೊದಲ ಕೆಲಸದ ದಿನವಾಗಿತ್ತು. ಮರುದಿನ ಆಕೆ ಶವವಾಗಿ ಪತ್ತೆಯಾಗಿದ್ದಾರೆ. ಐದು ದಿನಗಳ ಹಿಂದಷ್ಟೇ ಆಸ್ಪತ್ರೆಯನ್ನು ಆರಂಭಿಸಲಾಗಿತ್ತು ಎಂದು ವರದಿಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಮಹಿಳೆಯ ದೇಹವು ಗೋಡೆಗೆ ನೇತಾಡುತ್ತಿರುವ ದೃಶ್ಯಗಳನ್ನು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉನ್ನಾವೊದಲ್ಲಿ ಕಳೆದ ಕೆಲವು ವರ್ಷಗಳಿಂದ ಮಹಿಳೆಯರ ವಿರುದ್ಧ ಅತ್ಯಾಚಾರ ಸೇರಿದಂತೆ ಹಲವು ಘೋರ ಅಪರಾಧಗಳು ನಡೆಯುತ್ತಲೆ ಇದೆ. ಪ್ರಮುಖವಾಗಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್‌ 2017 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಸಂತ್ರಸ್ತೆಯ ತಂದೆಯ ಮೇಲೆ ಹಲ್ಲೆ ನಡೆಸಿ, ಅವರ ಸಾವಿಗೆ ಕಾರಣವಾಗಿದ್ದನು. ಇದರ ನಂತರ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ಆಗಸ್ಟ್ 2019 ರಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿದರೂ, ಯಾವುದೇ ಆರೋಪಿಗಳನ್ನು ಬಂಧಿಸದ ಕಾರಣಕ್ಕೆ ಉನ್ನಾವೋ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಬಾಲಕಿ ಮತ್ತು ಆಕೆಯ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಡಿಸೆಂಬರ್ 2019 ರಲ್ಲಿ 23 ವರ್ಷದ ಮಹಿಳೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದ ವ್ಯಕ್ತಿಗಳು ಆಕೆಗೆ ಬೆಂಕಿ ಹಚ್ಚಿದ್ದರಿಂದ ಸಾವನ್ನಪ್ಪಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನೀವು ನಮ್ಮ ಬೆನ್ನೆಲುಬು; ಪಕ್ಷದ ಡಿಎನ್‌ಎ..’; ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಸಂದೇಶ

0
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪಕ್ಷದ ಕಾರ್ಯಕರ್ತರಿಗೆ ಹೃದಯಸ್ಪರ್ಶಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಅಧಿಕೃತ ಹ್ಯಾಂಡಲ್‌ನಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ,...