Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ: ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆ ಅಮಾನ್ಯಗೊಳಿಸಿದ ಸರ್ಕಾರ

ಪ್ರಶ್ನೆಪತ್ರಿಕೆ ಸೋರಿಕೆ: ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆ ಅಮಾನ್ಯಗೊಳಿಸಿದ ಸರ್ಕಾರ

- Advertisement -
- Advertisement -

ಫೆಬ್ರವರಿ 17 ಮತ್ತು 18 ರಂದು ನಡೆದ ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಶನಿವಾರ ಅಮಾನ್ಯಗೊಳಿಸಲಾಗಿದೆ ಎಂದು ಅಧಿಕೃತ ಆದೇಶ ದೃಢಪಡಿಸಿದೆ.

ಮುಂದಿನ ಆರು ತಿಂಗಳೊಳಗೆ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಮರು ಪರೀಕ್ಷೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ.

“ರಿಸರ್ವ್ ಸಿವಿಲ್ ಪೊಲೀಸ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಪರೀಕ್ಷೆಯನ್ನು ಅಮಾನ್ಯಗೊಳಿಸಿದ ಮುಂದಿನ ಆರು ತಿಂಗಳೊಳಗೆ ಮರು ಪರೀಕ್ಷೆ ನಡೆಸಲು ಆದೇಶ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

“ಅತ್ಯಂತ ಶಿಸ್ತು ಬದ್ದವಾಗಿ ಪರೀಕ್ಷೆ ನಡೆಸುವುದರಲ್ಲಿ ಯಾವುದೇ ರಾಜಿಯಿಲ್ಲ. ಯುವಜನರ ಶ್ರಮದ ಜೊತೆ ಚೆಲ್ಲಾಟ ಆಡುವವರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಪರೀಕ್ಷೆ ರದ್ದತಿಯ ಕುರಿತು ಸಿಎಂ ಘೋಷಣೆ ಮಾಡುತ್ತಿದ್ದಂತೆ ಲಕ್ನೋದಲ್ಲಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದ್ದಾರೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಮೂರು ದಿನಗಳಲ್ಲಿ ಉತ್ತರ ಪ್ರದೇಶದಾದ್ಯಂತ 244 ಜನರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಹೇಳಿಕೆಯ ಪ್ರಕಾರ, ಫೆಬ್ರವರಿ 15 ರಿಂದ 18ರ ಸಂಜೆ 6 ಗಂಟೆಯ ನಡುವೆ ಆರೋಪಿಗಳ ಬಂಧನವಾಗಿದೆ. ಗುಪ್ತಚರ ಪಡೆಯ ಸಹಾಯದೊಂದಿಗೆ ಜಿಲ್ಲಾ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಘಟಕಗಳು ಆರೋಪಿಗಳನ್ನು ಸೆರೆ ಹಿಡಿದಿದೆ.

“ಬಂಧಿತ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಪರೀಕ್ಷೆ ಎದುರಿಸಲು ಅನ್ಯಾಯದ ಮಾರ್ಗ ಅನುಸರಿಸಿದ ವ್ಯಕ್ತಿಗಳು ಮತ್ತು ಗ್ಯಾಂಗ್‌ಗಳನ್ನು ಸೆರೆ ಹಿಡಿಯಲಾಗುತ್ತಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಅಕ್ರಮ ಮಾರ್ಗಗಳ ಮೂಲಕ ಅಭ್ಯರ್ಥಿಗಳು ಪರೀಕ್ಷೆ ಎದುರಿಸುವ ಮುನ್ನವೇ ಅವರನ್ನು ಬಂಧಿಸಲಾಗಿದೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಒಟ್ಟು 48 ಲಕ್ಷ ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 43 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಪ್ರಶ್ನೆಪತ್ರಿಕೆಯು ಸೋರಿಕೆಯಾಗಿರುವ ವಿಚಾರ ತಿಳಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು, ಕಳೆದ 5-6 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸಿ, ಮರು ಪರೀಕ್ಷೆ ನಡೆಸುವಂತೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದರು.

ಇದನ್ನೂ ಓದಿ : ಉತ್ತರ ಪ್ರದೇಶ: ಕೆರೆಗೆ ಉರುಳಿದ ಟ್ರ್ಯಾಕ್ಟರ್ ಟ್ರಾಲಿ; 8 ಮಕ್ಕಳು ಸೇರಿ 22 ಮಂದಿ ಮೃತ್ಯು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...